ADVERTISEMENT

ಆರೋಗ್ಯ ಕೇಂದ್ರಗಳಿಗೆ ಆಂಬುಲೆನ್ಸ್

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2017, 6:57 IST
Last Updated 8 ನವೆಂಬರ್ 2017, 6:57 IST

ಧಾರವಾಡ: ವೈಶುದೀಪ ಪ್ರತಿಷ್ಠಾನದ ವತಿಯಿಂದ ಧಾರವಾಡ ವಿಧಾನಸಭಾ ಕ್ಷೇತ್ರದ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಲಾ ಒಂದು ಆಯಂಬುಲೆನ್ಸ್‌ಗಳನ್ನು ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಜನ್ಮದಿನ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಆರ್.ಎಂ.ದೊಡ್ಡಮನಿ ಅವರಿಗೆ ವಾಹನಗಳ ಕೀ ಅನ್ನು ಸಚಿವ ಕುಲಕರ್ಣಿ ಹಸ್ತಾಂತರಿಸಿದರು. ಉಪ್ಪಿನಬೆಟಗೇರಿ, ಗರಗ, ಕೋಟೂರು, ಅಮ್ಮಿನಭಾವಿ, ಹೆಬ್ಬಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಈ ವಾಹನಗಳನ್ನು ನೀಡಲಾಯಿತು.

ಇದೇ ಸಂದರ್ಭದಲ್ಲಿ ರಕ್ತದಾನ ಶಬಿರ ಹಾಗೂ ಉಚಿತ ಆರೋಗ್ಯ ಶಿಬಿರ ಜರುಗಿತು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸುಲಭವಾಗುವಂತೆ ಅರ್ಥವಾಗುವಂತೆ ರಚಿಸಿದ ಪುಸ್ತಕಗಳನ್ನು ಸಾಹಿತಿ ರಂಜಾನ್‌ ದರ್ಗಾ ಬಿಡುಗಡೆ ಮಾಡಿದರು.

ಇದೇ ವೇಳೆ ಪ್ರತಿಷ್ಠಾನದ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಹಿತಿ ರಂಜಾನ್‌ ದರ್ಗಾ, ಮಹಾದೇವ ಹಂಪಣ್ಣವರ, ಮಾರ್ಕಂಡಯ್ಯ ದೊಡ್ಡಮನಿ, ಆನಂದ ದೊಡ್ಡಮನಿ ಅವರಿಗೆ ‘ಕಾಯಕಯೋಗಿ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಪ್ರತಿಷ್ಠಾನದ ಕಾರ್ಯದರ್ಶಿ ಶೀವಲೀಲಾ ಕುಲಕರ್ಣಿ ಮಾತನಾಡಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಕಲ್ಲಪ್ಪ ಪುಡಕಲಕಟ್ಟಿ ಇದ್ದರು.
 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.