ADVERTISEMENT

ಒಮರ್‌ ಟ್ವೀಟ್‌ಗೆ ಖಂಡನೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2017, 5:21 IST
Last Updated 19 ಏಪ್ರಿಲ್ 2017, 5:21 IST

ಧಾರವಾಡ: ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಕುರಿತು ಜಮ್ಮು–ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ ಅಬ್ದುಲ್ ಮಾಡಿರುವ ಅವಹೇಳನಕಾರಿ ಟ್ವೀಟ್‌ ಖಂಡಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ಜೆಡಿಎಸ್ ಜಿಲ್ಲಾ ಘಟಕದ ಕಾರ್ಯಕರ್ತರು ಓಮರ ಅಬ್ದುಲ್ಲಾ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಶಿಸ್ತು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಕುಲಭೂಷಣ ಜಾಧವ ವಿವಾದಕ್ಕೆ ಸಂಬಂಧಿಸಿದಂತೆ ಒಬ್ಬ ಮಾಜಿ ಪ್ರಧಾನಿಯ ಕುರಿತು ಅವಹೇಳನಕಾರಿ ಟ್ರೀಟ್‌ ಮಾಡಿರುವುದು ಸಭ್ಯತೆಯಲ್ಲ. ಅಲ್ಲದೇ ಈ ರೀತಿ ದೇಶ ವಿರೋಧಿ ಹೇಳಿಕೆ ನೀಡುವ ಮೂಲಕ ಜನರಲ್ಲಿ ದ್ವೇಷದ ಭಾವನೆ ಹುಟ್ಟಿಸುವ ಪ್ರಯತ್ನ ಮಾಡಲಾಗಿದೆ. ಇಂಥವರನ್ನು ದೇಶದಿಂದ ಗಡಿಪಾರು ಮಾಡಬೇಕು. ಜಮ್ಮು–ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ ಅಬ್ದುಲ್ ಕೂಡಲೇ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

‘ಕೇಂದ್ರ ಸರ್ಕಾರ ಒಮರ್‌ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ದೇಶಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ.ಪ್ರತಿಭಟನೆಯಲ್ಲಿ ಶ್ರೀಕಾಂತ ಜಮನಾಳ, ಭೀಮಪ್ಪ ಕಸಾಯಿ, ಶಾಂತವೀರ ಬೆಟಗೇರಿ, ರಾಜು ಅಂಬೊರೆ, ದೇವರಾಜ ಕಂಬಳಿ, ಹಸನ್ ಮೆಣಸಗಿ, ಮೋಹನ್ ಅರ್ಕಸಾಲಿ, ರಾಮಚಂದ್ರ ತಾವರೆ, ಸಿದ್ದಪ್ಪ ಮುಗಳಿ, ಮುದುಕಪ್ಪ  ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.