ADVERTISEMENT

‘ದೇವಾಲಯಗಳಿಂದ ಧರ್ಮ, ಸಂಸ್ಕೃತಿ ರಕ್ಷಣೆ’

​ಪ್ರಜಾವಾಣಿ ವಾರ್ತೆ
Published 27 ಮೇ 2017, 8:57 IST
Last Updated 27 ಮೇ 2017, 8:57 IST

ಹುಬ್ಬಳ್ಳಿ: ‘ನಮ್ಮ  ಧರ್ಮ, ಸಂಸ್ಕೃತಿ, ಆಚಾರ ಮತ್ತು ವಿಚಾರಗಳ ಸಂರಕ್ಷಣೆ ದೇವಾಲಯಗಳಿಂದ ಮಾತ್ರ ಸಾಧ್ಯ’ ಎಂದು ಕೂಡಲಿ ಶೃಂಗೇರಿ ಮಹಾಸಂಸ್ಥಾನದ ವಿದ್ಯಾರಣ್ಯಭಾರತಿ ಸ್ವಾಮೀಜಿ ಹೇಳಿದರು.

ಸೋಮವಂಶ ಆರ್ಯ ಕ್ಷತ್ರಿಯ (ಚಿತ್ರಗಾರ) ಸಮಾಜ ವತಿಯಿಂದ ಗುರುವಾರ ಏರ್ಪಡಿಸಿದ್ದ  ನಿಮಿಷಾಂಬಾ ದೇವಿ ಪ್ರಾರ್ಥನಾ ಭವನ ಲೋಕಾರ್ಪಣೆ ಮತ್ತು ದೇವಿಯ ವರ್ಧಂತಿ ಉತ್ಸವಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು.\ ದೇವಾಲಯ ನಿರ್ಮಾಣದ ಜೊತೆಗೆ ದಾನ, ಧರ್ಮ, ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಸೋಮವಂಶ ಆರ್ಯ ಕ್ಷತ್ರಿಯ ಚಿತ್ರಗಾರ ಸಮಾಜದಲ್ಲಿ ಪ್ರತಿಭಾವಂತ ಚಿತ್ರಕಲಾವಿದರಿದ್ದು, ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಹೇಳಿದರು.
ಸೋಮವಂಶ ಆರ್ಯ ಕ್ಷತ್ರಿಯ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ಅಶೋಕ ಗಾಯಕವಾಡ ಮಾತನಾಡಿ, ಸಮಾಜದ ವತಿಯಿಂದ ಶಿಕ್ಷಣ ಸಂಸ್ಥೆಯನ್ನು ಸ್ಥಾಪಿಸುವ ಉದ್ದೇಶವಿದೆ ಎಂದರು.

ADVERTISEMENT

ಭವ್ಯ ಸ್ವಾಗತ: ಕೂಡಲಿ ಶೃಂಗೇರಿ ಮಹಾಸಂಸ್ಥಾನದ ವಿದ್ಯಾರಣ್ಯಭಾರತಿ ಸ್ವಾಮೀಜಿ ಅವರನ್ನು ಪೂರ್ಣಕುಂಭ, ವಾದ್ಯ ಮೇಳದೊಂದಿಗೆ ಸ್ವಾಗತಿಸ­ಲಾಯಿತು. ಬೆಳಿಗ್ಗೆ ವಾಸ್ತು, ಗಣ ಹೋಮ ಹಾಗೂ ಸ್ವಾಮೀಜಿ ಅವರ ಪಾದಪೂಜೆ ನೆರವೇರಿಸಲಾಯಿತು.

ಪ್ರಾರ್ಥನಾ ಭವನ ನಿರ್ಮಾಣಕ್ಕೆ ಧನಸಹಾಯ ಮಾಡಿದ ದಾನಿಗಳನ್ನು ಸನ್ಮಾನಿಸಲಾಯಿತು. ಅಖಿಲ ಭಾರತ ಸೋಮವಂಶ ಕ್ಷತ್ರೀಯ ಸಮಾಜದ ಅಧ್ಯಕ್ಷ ಶಶಿಕಾಂತ ಜಾಧವ, ಹುಬ್ಬಳ್ಳಿ ಘಟಕದ ಅಧ್ಯಕ್ಷ ರವೀಂದ್ರ ಕೃಷ್ಣಾಜಿ ಖಾಪರೆ, ಉಪಾಧ್ಯಕ್ಷ ದತ್ತಾತ್ರೇಯ ನಾಗಮುಳೆ, ರಾಘವೇಂದ್ರ ಗರಗ, ಬಾಗಲಕೋಟೆ ಘಟಕದ ಕಾರ್ಯಾಧ್ಯಕ್ಷ ಶ್ರೀನಿವಾಸ ಪೇಟಕರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.