ADVERTISEMENT

ಧಾರವಾಡ ತಾಲ್ಲೂಕು ಸಾಹಿತ್ಯ ಸಮ್ಮೇಳನ ನ. 28ರಂದು

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2016, 9:09 IST
Last Updated 26 ನವೆಂಬರ್ 2016, 9:09 IST

ಅಳ್ನಾವರ: ಧಾರವಾಡ ತಾಲ್ಲೂಕು ಮಟ್ಟದ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ  ಇದೇ 28ರಂದು ಡಾ.ಈಶ್ವರ ಕಮ್ಮಾರ ಅಧ್ಯಕ್ಷತೆಯಲ್ಲಿ ಅಳ್ನಾವರದಲ್ಲಿ ನಡೆಯಲಿದೆ.

ಪಟ್ಟಣದ ಉಮಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ದುಂಡಮ್ಮ ತೇಗೂರ ರಾಷ್ಟ್ರಧ್ವಜಾರೋಹಣ ಮಾಡುವರು.  ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಾಡಧ್ವಜವನ್ನು ಹಾಗೂ ಹಿರಿಯರಾದ ಮುಜಾಹಿದ್‌ ಕಾಂಟ್ರಾಕ್ಟರ್‌ ಪರಿಷತ್ತಿನ ಧ್ವಜಾರೋಹಣ ಮಾಡಲಿದ್ದಾರೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಬಸವರಾಜ ಮುಡಬಾಗಿಲ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಾಹಿತಿ ಪ್ರೊ. ಬಿ.ಸುಕನ್ಯಾ ಸಮ್ಮೇಳನ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ಲಿಂಗರಾಜ ಅಂಗಡಿ ಆಶಯ ಭಾಷಣ ಮಾಡುವರು. ಬೈಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.