ADVERTISEMENT

ಪ್ರತಿ ತಿಂಗಳು 20ಕ್ಕೆ ಬಸ್‌ ದಿನ ಆಚರಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 18 ಜುಲೈ 2017, 6:38 IST
Last Updated 18 ಜುಲೈ 2017, 6:38 IST

ಹುಬ್ಬಳ್ಳಿ: ಪರಿಸರದ ಬಗ್ಗೆ ಜಾಗೃತಿ ಮೂಡಿಸಿ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಜುಲೈ 20ರಂದು ‘ಬಸ್‌ ದಿನ’ ಆಚರಿಸಲು ನಿರ್ಧರಿಸಿದೆ.

‘ಬಸ್‌ ದಿನದಂದು ಎಲ್ಲಾ ಜನಪ್ರತಿ­ನಿಧಿಗಳು, ಸಾರಿಗೆ ಇಲಾಖೆಯ ಅಧಿ­ಕಾರಿ­ಗಳು, ಸಿಬ್ಬಂದಿ, ಸರ್ಕಾರಿ ನೌಕರರು, ಸಾರ್ವಜನಿಕರು ಬಸ್‌ನಲ್ಲಿಯೇ ಸಂಚ­ರಿಸ­ಲಿದ್ದಾರೆ. ಅಂದು 50 ಹೆಚ್ಚುವರಿ ಬಸ್‌ಗಳು ಸಂಚರಿಸಲಿವೆ’ ಎಂದು ಸಾರಿಗೆ ಸಂಸ್ಥೆಯ ಅಧ್ಯಕ್ಷ ಸದಾನಂದ ಡಂಗನವರ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಪ್ರಾಯೋಗಿಕವಾಗಿ ಮೊದಲು ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಮೊದಲ ಸಲ ಬಸ್‌ ದಿನ ಆಚರಿಸ­ಲಾಗುತ್ತದೆ. ಈ ಕುರಿತು ಎಲ್ಲರಿಗೂ ಮಾಹಿತಿ ತಲುಪಿಸಿದ್ದೇವೆ. ಕರಪತ್ರ ಹಂಚಿ ಜಾಗೃತಿ ಮೂಡಿಸುತ್ತಿದ್ದೇವೆ. ಇನ್ನು ಮುಂದೆ ಪ್ರತಿ ತಿಂಗಳು 20ರಂದು ಬಸ್‌ ದಿನ ನಡೆಯಲಿದೆ. ನಮ್ಮ ಪ್ರಯತ್ನಕ್ಕೆ ಸಾರ್ವಜನಿಕರ ಸಹಕಾರ ಕೂಡ ಅಗತ್ಯ’ ಎಂದು ಅವರು ಹೇಳಿದರು.

ADVERTISEMENT

‘ಹುಬ್ಬಳ್ಳಿ–ಧಾರವಾಡ ನಗರಗಳಲ್ಲಿ ನಿತ್ಯ 2 ಲಕ್ಷ ಜನ ಬಸ್‌ ಬಳಕೆ ಮಾಡುತ್ತಾರೆ. ಬಸ್ ದಿನದಂದು ಈ ಸಂಖ್ಯೆ ದುಪ್ಪಟ್ಟಾಗುವ ನಿರೀಕ್ಷೆಯಿದೆ. ಸಾರ್ವಜನಿಕರ ಅನುಕೂಲಕ್ಕೆ ತಕ್ಕಂತೆ ಬಸ್‌ ಮಾರ್ಗ ನಿರ್ಧರಿಸುತ್ತೇವೆ. ಶ್ರಾವಣ ಮಾಸ ಹತ್ತಿರುವಿರುವ ಕಾರಣ ಮುಂದಿನ ದಿನಗಳಲ್ಲಿ ವಿವಿಧ ಬಡಾವಣೆಗಳಿಂದ ಮೂರುಸಾವಿರ ಮಠಕ್ಕೆ ಸಂಪರ್ಕ ಕಲ್ಪಿಸುವ ‘ಶ್ರಾವಣ ಎಕ್ಸ್‌ಪ್ರೆಸ್‌’ ಬಸ್ ಸಂಚಾರ ಆರಂಭಿಸುತ್ತೇವೆ’ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.