ADVERTISEMENT

ಬಿಜೆಪಿಯಿಂದ ಹೆದ್ದಾರಿ ತಡೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 6:31 IST
Last Updated 30 ಡಿಸೆಂಬರ್ 2017, 6:31 IST

ನವಲಗುಂದ: ಕಳಸಾ-ಬಂಡೂರಿ ಸಮಸ್ಯೆ ಇತ್ಯರ್ಥಪಡಿಸುವಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ವಿನಾಕಾರಣ ರಾಜಕಾರಣ ಮಾಡುತ್ತಿವೆ ಹಾಗೂ ವಿಜಯಪುರದಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ ಬಿಜೆಪಿ ತಾಲ್ಲೂಕು ಘಟಕದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಧ್ಯಾಹ್ನ ಗಣಪತಿ ದೇವಸ್ಥಾನ ದಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ತೆರಳಿ ನಂತರ ನೀಲಮ್ಮನ ಕೆರೆಯ ಮುಂದೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಿದರು. ನಂತರ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಮಾಜಿ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ವಿಧಾನಪರಿಷತ್ ಸದಸ್ಯ ಮಾಜಿ ಮೋಹನ ಲಿಂಬಿಕಾಯಿ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಚೈತ್ರಾ ಶಿರೂರ, ಜಿಲ್ಲಾ ಬಿಜೆಪಿ ಅಧ್ಯಕ್ಷ ಈರಣ್ಣ ಜಡಿ, ತಾಲ್ಲೂಕು ಅಧ್ಯಕ್ಷ ಸಿದ್ದನಗೌಡ ಪಾಟೀಲ, ರೈತ ಮೋರ್ಚಾ ಅಧ್ಯಕ್ಷ ಬಸಣ್ಣ ಬೆಳವಣಕಿ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.