ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಮದ್ಯದ ಟೆಟ್ರಾ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದಿದ್ದಾರೆ.ಹಳೇ ಹುಬ್ಬಳ್ಳಿಯ ಕರಿಯಮ್ಮ ಗುಡಿಯ ಬಯಲು ಜಾಗದಲ್ಲಿ 180 ಎಂ.ಎಲ್.ನ ಮಲ್ಟಿ ವಿಸ್ಕಿ ಎಂಬ ಹೆಸರಿನ 28 ಟೆಟ್ರಾ ಪ್ಯಾಕೆಟ್‌ಗಳನ್ನು ಸೋಮವಾರ ರಾತ್ರಿ ವಶಕ್ಕೆ ಪಡೆದಿದ್ದು, ಆರೋಪಿ ಚಂದ್ರಶೇಖರ ಸದಾವರ್ತಿ ಎಂಬುವವರನ್ನು ಬಂಧಿಸಿದ್ದಾರೆ. ಆನಂದ ನಗರದ ಮನೆಯೊಂದರ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ನಡೆಸಿದ ಪೊಲೀಸರು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 10 ಲೀಟರ್‌ನಷ್ಟು ವಿವಿಧ ಕಂಪನಿಗೆ ಸೇರಿದ ₹3, 057 ಮೌಲ್ಯದ ಮದ್ಯದ ಟೆಟ್ರಾ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆದು, ಆರೋಪಿ ಪೃಥ್ವಿರಾಜ ಮೆಹರವಾಡೆ ಎಂಬುವವರನ್ನು ಬಂಧಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.