ADVERTISEMENT

ಮಹಾದಾಯಿ ವಿವಾದ ಇತ್ಯರ್ಥಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 9:56 IST
Last Updated 16 ಏಪ್ರಿಲ್ 2017, 9:56 IST

ಧಾರವಾಡ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಂಡು ಕೂಡಲೇ ಮಹಾದಾಯಿ ವಿವಾದ ಇತ್ಯರ್ಥಪಡಿಸಬೇಕು ಎಂದು ರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಒತ್ತಾಯಿಸಿದರು.

640 ದಿನಗಳಿಂದ ಮಹಾದಾಯಿ ನೀರಿಗಾಗಿ ಈ ಭಾಗದ ಜನತೆ ನಿರಂತರ ಹೋರಾಟ ನಡೆಸುತ್ತಿದ್ದು, ನೀರು ಸಿಗುವ ತನಕ ಈ ಹೋರಾಟ ಮುಂದುವರಿಯಲಿದೆ. ಅಲ್ಲದೇ ನಾಲ್ಕು ಜಿಲ್ಲೆಗಳ ಸಂಸದರು ಬಿಜೆಪಿಯವರಾಗಿದ್ದು, ಅವರ ಪಕ್ಷವೇ ಕೇಂದ್ರದಲ್ಲಿ ಅಽಧಿಕಾರದಲ್ಲಿದೆ. ಹಾಗಾಗಿ ಜನರ ಸಂಕಷ್ಟ ಅರಿತು ತಕ್ಷಣವೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒಳಗೊಂಡ ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿ ಈ ವಿವಾದಕ್ಕೆ ಇತಿಶ್ರೀ ಹಾಡಬೇಕು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ಈ ವಿವಾದವನ್ನು ಜೀವಂತವಾಗಿಟ್ಟಿರುವ ರಾಜಕೀಯ ಪಕ್ಷಗಳ  ಹಾಗೂ ರಾಜಕಾರಣಿಗಳ ಬಣ್ಣ ಬಯಲಾಗಿದೆ. ಇದರಿಂದ ಬೇಸತ್ತಿರುವ ಸಾರ್ವಜನಿಕರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಮೊದಲೇ ಎಚ್ಚೆತ್ತುಕೊಂಡು ಕಳಸಾ-ಬಂಡೂರಿ ನಾಲಾ ಯೋಜನೆ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು. ಇಲ್ಲವಾದರೆ 4 ಜಿಲ್ಲೆಗಳ ಸಂಸದರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.ರೈತ ಸೇನಾದ ಪ್ರಧಾನ ಕಾರ್ಯದರ್ಶಿ ಶಂಕರಪ್ಪ ಅಂಬಲಿ ಮಾತನಾಡಿ, ಸರ್ಕಾರಗಳು ಪರಸ್ಪರ ಆರೋಪ ಮಾಡುವ ಬದಲು ಒಗ್ಗಟ್ಟಿನಿಂದ ವಿವಾದ ನಿವಾರಿಸಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.