ADVERTISEMENT

ವಿಜ್ಞಾನ ಬರಹಗಾರರ ಕೊರತೆ ನೀಗಲಿ

​ಪ್ರಜಾವಾಣಿ ವಾರ್ತೆ
Published 23 ಮೇ 2017, 8:58 IST
Last Updated 23 ಮೇ 2017, 8:58 IST
ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕವಿವಿ ಕುಲಪತಿ ಪ್ರೊ. ಪ್ರಮೋದ ಗಾಯಿ ಮಾತನಾಡಿದರು
ಧಾರವಾಡದ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕವಿವಿ ಕುಲಪತಿ ಪ್ರೊ. ಪ್ರಮೋದ ಗಾಯಿ ಮಾತನಾಡಿದರು   

ಧಾರವಾಡ: ‘ಪ್ರಾದೇಶಿಕ ಭಾಷೆಗಳಲ್ಲಿ ವಿಜ್ಞಾನ ವಿಷಯ ಕುರಿತ ಬರಹಗಾರರ ಸಂಖ್ಯೆ ಅತ್ಯಂತ ಕಡಿಮೆ ಇದೆ. ಇದಕ್ಕೆ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ನಿಘಂಟುಗಳ ಕೊರತೆಯೇ ಕಾರಣ’ ಎಂದು ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪ್ರಮೋದ ಗಾಯಿ ಅಭಿಪ್ರಾಯಪಟ್ಟರು.

ಇಲ್ಲಿನ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್‌, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ಪ್ರಾದೇಶಿಕ ವಿಜ್ಞಾನ ಕೇಂದ್ರ ವತಿಯಿಂದ ಹಮ್ಮಿಕೊಂಡ 31ನೇ ಅಖಿಲ ಕರ್ನಾಟಕ ಉದ ಯೋನ್ಮುಖ ವಿಜ್ಞಾನ ಲೇಖಕರ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಕನ್ನಡ ಭಾಷೆಯಲ್ಲಿ ವಿಜ್ಞಾನ ಬರಹಗಾರರ ಕೊರತೆ ಇದೆ. ಜಗತ್ತಿನ ಇತರ ರಾಷ್ಟ್ರಗಳಾದ ರಷ್ಯಾ ಮತ್ತು ಜಪಾನ್‌ನಂತಹ ಮೊದಲಾದ ರಾಷ್ಟ್ರಗಳು ತಮ್ಮದೇ ಆದ ಭಾಷೆಗಳಲ್ಲಿ ವಿಜ್ಞಾನದ ಕುರಿತು ಪ್ರಕಟಣೆಗಳನ್ನು ನಿರಾಯಾಸವಾಗಿ ಪ್ರಕಟಿಸುತ್ತಿವೆ.

ADVERTISEMENT

ಆದರೆ, ನಮ್ಮ ದೇಶದಲ್ಲಿ ಪ್ರಾದೇಶಿಕ ಭಾಷೆಗಳಲ್ಲಿ ಸಾಹಿತ್ಯ ಹಾಗೂ ವಿಜ್ಞಾನ ಶಬ್ದಗಳ ಅರ್ಥ ತಿಳಿಸುವ ನಿಘಂಟುಗಳ ಕೊರತೆಯಿಂದ ಅದು ಸಾಧ್ಯವಾಗುತ್ತಿಲ್ಲ’ ಎಂದರು.
‘ರಾಜ್ಯದಲ್ಲಿ ವೈಜ್ಞಾನಿಕ ಭಾಷೆಯ ಅಭಿವೃದ್ಧಿ ಹಾಗೂ ಕನ್ನಡದಲ್ಲಿ ವಿವಿಧ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ನಿಘಂಟುಗಳ ಪ್ರಕಟಣೆಗೆ ರಾಜ್ಯ ವಿಜ್ಞಾನ ಪರಿಷತ್‌ ಮುಂದಾಗಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.