ADVERTISEMENT

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ; ಕಿಮ್ಸ್‌ ಆಸ್ಪತ್ರೆಯಲ್ಲಿ ಕಾದು ಕುಳಿತ ರೋಗಿಗಳು

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2017, 6:06 IST
Last Updated 25 ಮಾರ್ಚ್ 2017, 6:06 IST
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ; ಕಿಮ್ಸ್‌ ಆಸ್ಪತ್ರೆಯಲ್ಲಿ ಕಾದು ಕುಳಿತ ರೋಗಿಗಳು
ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ; ಕಿಮ್ಸ್‌ ಆಸ್ಪತ್ರೆಯಲ್ಲಿ ಕಾದು ಕುಳಿತ ರೋಗಿಗಳು   

ಹುಬ್ಬಳ್ಳಿ: ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ವೈದ್ಯರ ಮೇಲೆ ಹಲ್ಲೆ ಖಂಡಿಸಿ ಭಾರತೀಯ ವೈದ್ಯಕೀಯ ಸಂಘದದಿಂದ ಶನಿವಾರ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಇದರಿಂದ, ಆಸ್ಪತ್ರೆಯಲ್ಲಿ ವೈದ್ಯರಿಲ್ಲಲ್ಲದೆ ರೋಗಿಗಳು ಚಿಕಿತ್ಸೆಗಾಗಿ ಸರದಿಯಲ್ಲಿ ಕಾದು ಕುಳಿತಿದ್ದಾರೆ.

ನಗರದ ಕಿಮ್ಸ್ ದ್ವಾರದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ವೈದ್ಯರು, ಕಿರಿಯ ವೈದ್ಯರು, ವೈದ್ಯಕೀಯ ಪಿ.ಜಿ. ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ. ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ಸರದಿಯಲ್ಲಿ ಕಾದು ಕುಳಿತ ರೋಗಿಗಳು

ADVERTISEMENT

ವೈದ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರಿಂದ ಕಿಮ್ಸ್ ಹೊರರೋಗಿ ವಿಭಾಗದಲ್ಲಿ ವೈದ್ಯರ ಕೊರತೆ ಇತ್ತು. ಕೇವಲ ಒಂದಿಬ್ಬರು ಪಿ.ಜಿ. ವೈದ್ಯಕೀಯ ವಿದ್ಯಾರ್ಥಿಗಳು ರೋಗಿಗಳ ತಪಾಸಣೆ ಮಾಡುತ್ತಿದ್ದಾರೆ. ಹೊರಗೆ ರೋಗಿಗಳು ಸರದಿಯಲ್ಲಿ ಕಾದು ಕುಳಿತ್ತಿದ್ದರು.

ತುರ್ತು ಚಿಕಿತ್ಸಾ ವಿಭಾಗ ಹೊರತುಪಡಿಸಿ ಉಳಿದ ವಿಭಾಗಗಳಲ್ಲಿ ಬೆರಳೆಣಿಕೆಯಷ್ಟು ಮಾತ್ರ ಪಿ.ಜಿ. ವೈದ್ಯಕೀಯ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.