ADVERTISEMENT

ಪ್ರಧಾನಿ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2018, 10:19 IST
Last Updated 5 ಫೆಬ್ರುವರಿ 2018, 10:19 IST

ಧಾರವಾಡ: ಮಹದಾಯಿ, ಕಳಸಾ-ಬಂಡೂರಿ ನಾಲಾ ಜೋಡಣೆ ವಿಚಾರ ದಲ್ಲಿ ದಿವ್ಯ ನಿರ್ಲಕ್ಷ್ಯ ತೋರುತ್ತಿರುವ ಪ್ರಧಾನಿ ನರೇಂದ್ರ ಮೋದಿ ನಡೆಯನ್ನು ಖಂಡಿಸಿ, ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಭಾನುವಾರ ಇಲ್ಲಿನ ವಿವೇಕಾನಂದ ವೃತ್ತದಲ್ಲಿ ಮೋದಿ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಿದರು.

ದಶಕಗಳಿಂದ ಉತ್ತರ ಕರ್ನಾಟಕ ಭಾಗದ ರೈತರ ಹಾಗೂ ಜನರ ನ್ಯಾಯಯುತವಾದ ಈ ಭಾಗದ ಜನರ ಬೇಡಿಕೆಯನ್ನು ಕಡೆಗಣಿಸುತ್ತಿರುವುದು ಖಂಡನೀಯ. ಸುಮಾರು ಎರಡೂವರೆ ವರ್ಷಗಳಿಂದ ಮಹದಾಯಿ ಹೋರಾಟ ತೀವ್ರಗೊಂಡಿದ್ದರೂ, ಪ್ರಧಾನಿ ಮೋದಿ ಈ ವಿಚಾರ ದಲ್ಲಿ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥಪಡಿಸದೇ ಪಕ್ಷ ರಾಜಕಾರಣ ಮಾಡುತ್ತಿರುವದು ಒಕ್ಕೂಟ ವ್ಯವಸ್ಥೆಗೆ ಮಾಡಿದ ಅಪಮಾನವಾಗಿದೆ’ ಎಂದು ಆರೋಪಿಸಿದರು. ಲಕ್ಷ್ಮಣ ಬ. ದೊಡ್ಡಮನಿ, ನಾರಾಯಣ ಮಾದರ, ಎಚ್. ರಾಮಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT