ADVERTISEMENT

ಅತ್ಯಾಚಾರ ಪ್ರಕರಣ ಖಂಡಿಸಿ ವಿದ್ಯಾರ್ಥಿ, ಮಹಿಳಾ ಸಂಘಟನೆಗಳ ಪ್ರತಿಭಟನೆ

ಮಧ್ಯಪ್ರದೇಶದ ಮಂಡಸೌರದಲ್ಲಿ ಏಳು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 5 ಜುಲೈ 2018, 10:36 IST
Last Updated 5 ಜುಲೈ 2018, 10:36 IST
ಮಧ್ಯಪ್ರದೇಶದ ಮಂಡಸೌರದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್‌ ಸ್ಟುಡೆಂಟ್‌ ಆರ್ಗನೈಜೇಶನ್ (ಎಐಡಿಎಸ್‌ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು  ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. 
ಮಧ್ಯಪ್ರದೇಶದ ಮಂಡಸೌರದಲ್ಲಿ ಬಾಲಕಿ ಮೇಲೆ ನಡೆದ ಅತ್ಯಾಚಾರ ಘಟನೆ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್‌ ಸ್ಟುಡೆಂಟ್‌ ಆರ್ಗನೈಜೇಶನ್ (ಎಐಡಿಎಸ್‌ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು  ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.    

ಧಾರವಾಡ:ಮಧ್ಯಪ್ರದೇಶದ ಮಂಡಸೌರದಲ್ಲಿ ಏಳು ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಖಂಡಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಓ), ಎಐಎಂಎಸ್‌ಎಸ್‌, ಎಐಡಿಯುಓ ಜಂಟಿಯಾಗಿ ಗುರುವಾರ ನಗರದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದವು.

ಈ ಸಂದರ್ಭದಲ್ಲಿ ಎಐಎಂಎಸ್‌ಎಸ್ ಮಹಿಳಾ ಸಂಘಟನೆಯ ಸದಸ್ಯೆ ಮಧುಲತಾ ಗೌಡರ್ ಮಾತನಾಡಿ, ‘ಈ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತದ್ದು. ಈ ಕೃತ್ಯ ಎಸಗಿದವರನ್ನು ಕೂಡಲೇ ಉಗ್ರ ಶಿಕ್ಷೆಗೊಳಪಡಿಸಬೇಕು. ದೇಶದಲ್ಲಿ ಬಾಲಕಿಯರು, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳಿಗೆ ಪ್ರಮುಖವಾಗಿ ಅಶ್ಲೀಲ ಅಂತರ್ಜಾಲ ತಾಣಗಳು, ಸಿನಿಮಾ ಸಾಹಿತ್ಯ ಕಾರಣ. ಆದ್ದರಿಂದ ಸರ್ಕಾರಗಳು ಕೂಡಲೇ ಸಾಮಾಜಿಕ ಜಾಲತಾಣಗಳಲ್ಲಿ, ಸಿನಿಮಾ, ಸಾಹಿತ್ಯಗಳಲ್ಲಿ ಅಶ್ಲೀಲತೆಯನ್ನು ಸಂಪೂರ್ಣವಾಗಿ ತೆಗೆದು ಹಾಕಬೇಕು’ ಎಂದು ಆಗ್ರಹಿಸಿದರು.

ಎಐಡಿವೈಓ ಸಂಘಟನೆಯ ರಮೇಶ ಹೊಸಮನಿ ಮಾತನಾಡಿ, ’ನಿರಂತರವಾಗಿ ಹೆಚ್ಚುತ್ತಿರುವ ಬಾಲಕಿಯರ, ಮಹಿಳೆಯರ ಮೇಲಿನ ಅತ್ಯಾಚಾರ ದೌರ್ಜನ್ಯಗಳನ್ನು ತಡೆಗಟ್ಟಲು ಸರ್ಕಾರಗಳು ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇದರ ಪರಿಣಾಮವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ. ಮಹಿಳೆಯರ ಭದ್ರತೆ ಬಗ್ಗೆ ಸರ್ಕಾರಗಳು ನಿಷ್ಕಾಳಜಿ ತೋರುತ್ತಿವೆ. ಇಂಥ ಘಟನೆಗಳು ನಡೆದಾಗಲಾದರೂ ಸರ್ಕಾರಗಳು ಎಚ್ಚೆತ್ತುಕೊಂಡು ಸುರಕ್ಷಿತ ವಾತಾವರಣ ನಿರ್ಮಾಣ ಮಾಡಬೇಕು’ ಎಂದು ಮಧುಲತಾ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಶರಣು ಗೋನವಾರ, ಭವಾನಿಶಂಕರ್ ಎಸ್.ಗೌಡ, ಹನುಮೇಶ ಹುಡೇದ, ವಿಜಯಲಕ್ಷ್ಮಿ ದೇವತ್ಕಲ್, ಗಂಗಾ ಕೋಕರೆ, ಮಹಾಂತೇಶ ಬೀಳೂರು, ರಂಜಿತ್ ದೂಪದ್, ಶಶಿಕಲಾ ಮೇಟಿ, ವಿವಿಧ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.