ADVERTISEMENT

ಅನುದಾನದ ದುರ್ಬಳಕೆ: ಆರೋಪ

​ಪ್ರಜಾವಾಣಿ ವಾರ್ತೆ
Published 21 ಮೇ 2017, 7:06 IST
Last Updated 21 ಮೇ 2017, 7:06 IST

ಗದಗ: ‘ತಾಲ್ಲೂಕಿನ ಬಳಗಾನೂರ ಗ್ರಾಮದಲ್ಲಿ ಅಂದಾಜು ಪತ್ರಿಕೆ ಅನ್ವಯ ಯಾವುದೇ ಕಾಮಗಾರಿಗಳು ನಡೆಯು ತ್ತಿಲ್ಲ. ಸರ್ಕಾರದಿಂದ ಬಿಡುಗಡೆಯಾದ ಅನುದಾನ ದುರ್ಬಳಕೆಯಾಗುತ್ತಿದೆ’ ಎಂದು ಗ್ರಾಮದ ನಿವಾಸಿ ಹನುಮಂತ ಗೌಡ ಕಲ್ಮನಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ರುವ ಅವರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಿಂದ ಗ್ರಾಮದಲ್ಲಿ ಓವರ್ ಹೆಡ್ ಟ್ಯಾಂಕ್ ನಿರ್ಮಿಸಲಾಗುತ್ತಿದೆ. ಆದರೆ, ಅಂದಾಜು ಪತ್ರಿಕೆ ಪ್ರಕಾರ ಕಾಮಗಾರಿಗಳು ನಡೆಯು ತ್ತಿಲ್ಲ. ಕಾಮಗಾರಿ ಕಳಪೆ ಗುಣಮಟ್ಟ ದಿಂದ ಕೂಡಿದೆ ಎಂದು ದೂರಿದ್ದಾರೆ.

ಗ್ರಾಮದಲ್ಲಿ 8 ತಿಂಗಳ ಹಿಂದೆ ಸಿ.ಸಿ ರಸ್ತೆ ನಿರ್ಮಿಸಲಾಗಿತ್ತು. ಆದರೆ, ವಾರದ ಹಿಂದೆ ಸುರಿದ ಮಳೆಗೆ ರಸ್ತೆ ಸಂಪೂರ್ಣ ಹಾಳಾಗಿದೆ. ರಸ್ತೆಯಲ್ಲಿನ ಜಲ್ಲಿಕಲ್ಲುಗಳು ಮೇಲೆ ಕಾಣುತ್ತಿವೆ. ಮಹಿಳೆಯರು, ಮಕ್ಕಳು, ವೃದ್ಧರು ರಸ್ತೆಯಲ್ಲಿ ಸಂಚರಿ ಸಲು ಕಷ್ಟ ಅನುಭವಿಸುತ್ತಿದ್ದಾರೆ.  ಓವರ್ ಹೆಡ್ ಟ್ಯಾಂಕ್ ಹಾಗೂ ಸಿ.ಸಿ ರಸ್ತೆ ಕಾಮಗಾರಿಗಳಲ್ಲೂ ಅನುದಾನ ದುರ್ಬ ಳಕೆ ಆಗಿದೆ ಎಂದು ಆರೋಪಿಸಿದ್ದಾರೆ.

ADVERTISEMENT

ಕಳಪೆ ಕಾಮಗಾರಿ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯ್ತಿ ಅಧಿಕಾರಿ ಗಳಿಗೆ ಪತ್ರ ಬರೆಯಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕಳಪೆ ಕಾಮಗಾರಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.