ADVERTISEMENT

ಕೌಶಲ ರೂಢಿಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2017, 9:03 IST
Last Updated 8 ಫೆಬ್ರುವರಿ 2017, 9:03 IST

ಗದಗ: ವಿದ್ಯಾರ್ಥಿಗಳು ಉತ್ತಮ ಕೌಶಲ ರೂಢಿಸಿಕೊಳ್ಳಬೇಕು ಎಂದು ಸಿಡಾಕ್ ಸಂಸ್ಥೆಯ ಉಪನಿರ್ದೇಶಕ ಸಿ.ಎಚ್.­ಅಂಗಡಿ ಹೇಳಿದರು. ನಗರದ ಕೆ.ಎಲ್.ಇ ಸಂಸ್ಥೆಯ ಜೆ.ಟಿ.ಮಹಾವಿದ್ಯಾಲಯದಲ್ಲಿ ಸಿಡಾಕ್ ಸಂಸ್ಥೆಯ ಆಶ್ರಯದಲ್ಲಿ ಬಿ.ಎ, ಬಿ.ಕಾಂ, ಬಿ.ಎಸ್ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗೆ ಸೋಮವಾರ ನಡೆದ ಸ್ವಯಂ ಉದ್ಯೋಗಾವಕಾಶ ಜಾಗೃತಿ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಮಹಿಳಾ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿನಿಯರಿಗೆ ವಿಶೇಷ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಶಿಬಿರದ ಪ್ರಯೋಜನ ಪಡೆದು ನಿರುದ್ಯೋಗ ಸಮಸ್ಯೆಯಿಂದ ಮುಕ್ತರಾಗಬೇಕು. ಸರ್ಕಾರದಿಂದ ದೊರೆಯುವ ಧನ ಸಹಾಯ ಪಡೆದುಕೊಂಡು ಸ್ವಯಂ ಉದ್ಯೋಗ ಕೈಗೊಳ್ಳಬೇಕು ಎಂದರು.

ವಿದ್ಯಾರ್ಥಿಗಳು ತರಬೇತಿ ಪಡೆಯುವ ಮೂಲಕ ಕೌಶಲಗಳನ್ನು ರೂಢಿಸಿಕೊಳ್ಳಬೇಕು. ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳ­ಬಹುದು. ಕೌಶಲ ರೂಢಿಸಿಕೊಳ್ಳುವುದರಿಂದ ಬೇಗನೆ ಉದ್ಯೋಗ ಅವಕಾಶ ಪಡೆಯಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು. ಪ್ರಾಚಾರ್ಯ ಸಿ.ಲಿಂಗಾರೆಡ್ಡಿ ಮಾತನಾಡಿದರು.

ಇಂದುಮತಿ ಹವಳೆ ಪ್ರಾರ್ಥಿಸಿದರು, ಎಸ್.ಜೆ.ಹಿರೇಮಠ ಸ್ವಾಗತಿಸಿದರು, ವಿದ್ಯಾರ್ಥಿನಿ ರೂಪಾ, ರುದ್ರಮ್ಮ, ಗಂಗಾ, ಲಕ್ಷ್ಮೀ, ವಿಜಯಕುಮಾರಿ ಶಿಬಿರದ ಕುರಿತು ಅನಿಸಿಕೆಗಳನ್ನು ಹಂಚಿಕೊಂಡರು. ವಿದ್ಯಾರ್ಥಿನಿಯರಿಗೆ ಶಿಬಿರದ ಪ್ರಮಾಣಪತ್ರ ವಿತರಿಸಲಾಯಿತು. ಧರ್ಮೆಂದ್ರ, ಸಂತೋಷ, ಪವನ ದೇಶಪಾಂಡೆ ಇದ್ದರು. ನಿಂಗಮ್ಮ, ವೀರಮ್ಮ ನಿರೂಪಿಸಿದರು, ಶಿಲ್ಪಾ ಸುಣಗಾರ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.