ADVERTISEMENT

ನಿಲ್ಲದ ಹೆಣ್ಣು ಭ್ರೂಣ ಹತ್ಯೆ: ಆತಂಕ

ಗದುಗಿನ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ಶಹರ ಘಟಕದಿಂದ ಮಹಿಳಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2017, 11:07 IST
Last Updated 11 ಮಾರ್ಚ್ 2017, 11:07 IST
ಗದಗ: ಸಮಾಜದಲ್ಲಿ ಇಂದಿಗೂ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದು ದುರ ದೃಷ್ಟಕರ ಸಂಗತಿಯಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಸಿ. ಪಾಟೀಲ ಆತಂಕ ವ್ಯಕ್ತಪಡಿಸಿದರು.
 
ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಬಿಜೆಪಿ ಶಹರ ಘಟಕ ದಿಂದ ಶುಕ್ರವಾರ ನಡೆದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
 
ತಂದೆ–ತಾಯಿ ಗಂಡು–ಹೆಣ್ಣು ಮಕ್ಕಳಲ್ಲಿ ತಾರತಮ್ಯ ಮಾಡಬಾರದು. ಪ್ರತಿ ಮಗುವಿಗೂ ಉತ್ತಮ ಶಿಕ್ಷಣ ಕೊಡುವತ್ತ ವಿಶೇಷ ಗಮನ ಹರಿಸಬೇಕು. ಸಮಾಜದಲ್ಲಿ ಮಹಿಳಾ ಶಿಕ್ಷಣಕ್ಕೆ ಹೆಚ್ಚು ಮಹತ್ವ ದೊರೆತರೆ ಮಾತ್ರ ಶಾಂತಿ, ನೆಮ್ಮದಿ, ಸಮಾನತೆ ನೆಲೆಸಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬರೂ ಮಹಿಳಾ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.
 
ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಹೆಣ್ಣು ಮಕ್ಕಳಿಗಾಗಿ ಭಾಗ್ಯ ಲಕ್ಷ್ಮಿ ಯೋಜನೆ ಜಾರಿಗೆ ತಂದಿದ್ದರು. ಸದ್ಯ ಪ್ರಧಾನಿ ನರೇಂದ್ರ ಮೋದಿ ಅವರು ಬೇಟಿ ಪಢಾವೋ, ಬೇಟಿ ಬಚಾವೋ ಯೋಜನೆ ಜಾರಿಗೆ ತಂದಿದ್ದಾರೆ ಎಂದರು.
 
ಮಹಿಳೆಯರು ನಮ್ಮ ಸಂಸ್ಕೃತಿ ಉಳಿಸಿ, ಬೆಳೆಸುತ್ತಿದ್ದಾರೆ. ಓಲಿಂಪಿಕ್ಸ್‌ನಲ್ಲಿ ದೇಶದ ಮಾನ ಉಳಿಸಿದ್ದು ಇಬ್ಬರು ಹೆಣ್ಣುಮಕ್ಕಳು. ಆದ್ದರಿಂದ ಪಾಲಕರು ಹೆಣ್ಣು ಮಗು ಎಂದು ಹಿಂಜರಿಯದೇ ಮಗುವಿನ ಪ್ರತಿಭೆ ಗಮನಿಸಿ, ಪ್ರೋತ್ಸಾಹಿ ಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ ಹೇಳಿದರು.
 
ಮಾಜಿ ಶಾಸಕ ಶ್ರೀಶೈಲಪ್ಪ ಬಿದ ರೂರ, ಬಿಜೆಪಿ ರಾಜ್ಯ ವಕ್ತಾರೆ ತೇಜಸ್ವಿನಿ ರಮೇಶ, ಸುಮಾ ಶ್ರೀಗಿರಿ, ಬಿಜೆಪಿ ಶಹರ ಘಟಕ ಅಧ್ಯಕ್ಷೆ ಶಾರದಾ ಹಿರೇಮಠ, ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಅಶ್ವಿನಿ ಜಗತಾಪ, ಮಾಜಿ ಶಾಸಕ ರಾಮಣ್ಣ ಲಮಾಣಿ, ನಗರಸಭೆ ಸದಸ್ಯೆ ಜಯಶ್ರೀ ಭೈರವಾಡೆ, ಪಾರ್ವತಿ ಪತ್ತಾರ, ಅನಿಲ ಅಬ್ಬಿಗೇರಿ, ರಾಜು ಕುರುಡಗಿ, ಮೋಹನ ಮಾಳಶೆಟ್ಟಿ ಇದ್ದರು.
 
ಸ್ವತಂತ್ರ  ಅಸ್ತಿತ್ವ
ಗದಗ: ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯು ತಮ್ಮದೇ ಆದ ಅಸ್ತಿತ್ವ ಕಾಯ್ದುಕೊಂಡಿ ದ್ದಾರೆ ಎಂದು ಡಾ.ಜ್ಯೋತಿ ಕಾಮತ್ ಹೇಳಿದರು. ನಗರದ ಅಕ್ಕನ ಬಳಗದಲ್ಲಿ ಈಚೆಗೆ ನಡೆದ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
 
ಮಹಿಳಾ ದಿನಾಚರಣೆ ಅಂಗವಾಗಿ ಮಾ.15 ರಂದು ಬೆಳಿಗ್ಗೆ 7ಕ್ಕೆ ನಗರದ ಜೆ.ಟಿ.ಕಾಲೇಜಿನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮ್ಯಾರಥಾನ್ ಏರ್ಪಡಿಸ ಲಾಗಿದೆ. ನಗರದ ಎಲ್ಲ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ವಿದ್ಯಾದಾನ ಸಮಿತಿ ಹೆಣ್ಣು ಮಕ್ಕಳ ಪ್ರೌಢಶಾಲೆಯ ವಿದ್ಯಾರ್ಥಿ ಪೂಜಾ ಮುತ್ತಿನಪೆಂಡಿಮಠ ಅವರನ್ನು ಸನ್ಮಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.