ADVERTISEMENT

ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 6:52 IST
Last Updated 19 ಜುಲೈ 2017, 6:52 IST

ಮುಂಡರಗಿ: ತಾಲ್ಲೂಕಿನ ಸಿಂಗಟಾಲೂರ ಹುಲಿಗುಡ್ಡ ಏತ ನೀರಾವರಿ ಯೋಜ ನೆಯ ಕಾಲುವೆ ನಿರ್ಮಾಣಕ್ಕೆ ಭೂಮಿ ಕಳೆದುಕೊಂಡ ರೈತರಿಗೆ ತಕ್ಷಣ ಸೂಕ್ತ ಪರಿಹಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ರುದ್ರಗೌಡ ಪಾಟೀಲ ಒತ್ತಾಯಿಸಿದರು. ಸ್ಥಳೀಯ ತಾಲ್ಲೂಕು ಪಂಚಾಯಿತಿ ಸಾಮಾಥ್ಯ ಸೌಧದಲ್ಲಿ ಸೋಮವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಹಲವು ವರ್ಷಗಳಿಂದ ತಾಲ್ಲೂಕು ಸತತ ಬರಗಾಲಕ್ಕೆ ಈಡಾಗುತ್ತಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಮೀನು ಕಳೆದುಕೊಂಡ ರೈತರಿಗೆ ಪರಿ ಹಾರ ವಿತರಿಸುವ ಕುರಿತು ಅಧಿಕಾರಿಗಳು ಕಾಳಜಿ ವಹಿಸಬೇಕು. ತಕ್ಷಣ ರೈತರಿಗೆ ಪರಿಹಾರ ನೀಡಬೇಕು ಎಂದರು.

ನೀರಾವರಿ ಇಲಾಖೆ ಎಇಇ ಎಂ.ಎಸ್. ವಾಲಿಕಾರ ಮಾತನಾಡಿ, ಪರಿಹಾರ ನೀಡುವ ಕುರಿತು ಈಗಾಗಲೇ ಮೇಲಧಿ ಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಇನ್ನು ಆರು ತಿಂಗಳ ಒಳಗಾಗಿ ಪರಿಹಾರ ನೀಡಲಾಗುವುದು ಎಂದರು.

ADVERTISEMENT

ತಾಲ್ಲೂಕು ಪಂಚಾಯಿತಿ ಸದಸ್ಯೆ ಕುಸುಮಾ ಮೇಟಿ ಮಾತನಾಡಿ, ತೋಟ ಗಾರಿಕೆ ಬೆಳೆಗಳನ್ನು ಬೆಳೆಯಬೇಕು ಎಂಬ ಆಸಕ್ತಿ ಇರುವ ರೈತರು ತೋಟಗಾರಿಕೆ ಇಲಾಖೆಗೆ ಬಂದು ಮಾಹಿತಿ ಕೇಳಿದರೆ ಅಧಿಕಾರಿಗಳು ಅವರ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸುವುದಿಲ್ಲ ಎಂದು ರೈತರು ದೂರುತ್ತಿದ್ದಾರೆ. ಆದ್ದರಿಂದ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ತೋಟಗಾರಿಕೆ ಇಲಾಖೆ ಅಧಿಕಾರಿ ಸುರೇಶ ಆರೋರಾ ಮಾತನಾಡಿ, ತೋಟ ಗಾರಿಕೆ ಬೆಳೆಗಳನ್ನು ಬೆಳೆಯುವಂಥ ರೈತರು ಸೂಕ್ತ ದಾಖಲಾತಿಗಳನ್ನು ಸಲ್ಲಿಸು ವಂತೆ ತಾಲ್ಲೂಕಿನ ರೈತರಿಗೆ ಈಗಾಗಲೇ ಸೂಚಿಸಲಾಗಿದೆ ಎಂದು ತಿಳಿಸಿದರು.

ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎ.ರಡ್ಡೇರ ಮಾತನಾಡಿ, ಶಾಲಾ ಮಕ್ಕಳಿಗೆ ಈಗಾಗಲೆ ಪುಸ್ತಕ, ಬಟ್ಟೆ, ಹಾಗೂ ಶೂ ವಿತರಿಸಲಾಗಿದೆ. ಕೆಲವು ಶಾಲೆಗಳಿಗೆ ಇನ್ನೂ ವಿತರಿಸಬೇಕಾಗಿದೆ ಎಂದು ತಿಳಿಸಿದರು. ‘ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಮಕ್ಕಳಿಗೆ ನೀಡುವ ಕಾರ್ಯಕ್ರಮಗಳಲ್ಲಿ ಆಯಾ ಭಾಗದ ಜನಪ್ರತಿನಿಧಿಗಳನ್ನು ಆಹ್ವಾನಿಸುವುದಿಲ್ಲ’ ಎಂದು  ಸದಸ್ಯ ರುದ್ರಗೌಡ ಪಾಟೀಲ ಆಕ್ಷೇಪ ವ್ಯಕ್ತಪಡಿಸಿದರು.

ಎಲ್ಲ ಸಭೆ ಸಮಾರಂಭಗಳಿಗೆ ಆಯಾ ಭಾಗದ ಜನಪ್ರತಿನಿಧಿಗಳನ್ನು ಆಹ್ವಾನಿಸ ಬೇಕು ಎಂದು ತಾ.ಪಂ.ಅಧ್ಯಕ್ಷೆ ರೇಣುಕಾ ಕೊರ್ಲಹಳ್ಳಿ ಅವರು ಬಿಇಒ ರಡ್ಡೇರಗೆ ಸೂಚಿಸಿದರು. ವಿವಿಧ ಇಲಾಖೆಗಳ ಅಧಿ ಕಾರಿಗಳು ತಮ್ಮ ಇಲಾಖೆಯ ಮಾಹಿತಿ ನೀಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ರೇಣುಕಾ ಕೊರ್ಲಹಳ್ಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಹೇಮಾವತಿ ಕನ್ನಾರಿ, ಕಾರ್ಯನಿರ್ವಹಣಾ ಅಧಿಕಾರಿ ಸಿ.ಆರ್.ಮುಂಡರಗಿ, ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.