ADVERTISEMENT

ಮಕ್ಕಳ ಸಮಗ್ರ ವಿಕಾಸಕ್ಕೆ ಆದ್ಯತೆ ನೀಡಿ

​ಪ್ರಜಾವಾಣಿ ವಾರ್ತೆ
Published 23 ಜುಲೈ 2017, 7:07 IST
Last Updated 23 ಜುಲೈ 2017, 7:07 IST

ಮುಂಡರಗಿ: ಮನೆ, ಶಾಲೆ ಮತ್ತು ಸಮಾಜದ ಮಧ್ಯದಲ್ಲಿ ನಮ್ಮ ಮಕ್ಕಳು ಪ್ರತಿನಿತ್ಯ ವಿವಿಧ ಹಂತಗಳಲ್ಲಿ ವಿಕಾಸ ಗೊಳ್ಳುತ್ತಿರುತ್ತಾರೆ. ಅವರ ದೈಹಿಕ ಹಾಗೂ ಮಾನಸಿಕ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುವಂತಹ ವಾತಾವರಣ ವನ್ನು ನಾವೆಲ್ಲ ಸೃಷ್ಟಿಸಬೇಕು ಎಂದು ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಶಂಕರ ಹಡಗಲಿ ಹೇಳಿದರು.

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ತಾಲ್ಲೂಕು ಘಟಕವು ಶುಕ್ರವಾರ ಸ್ಥಳೀಯ ಎಂಸಿಎಸ್ ಶಾಲೆಯಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸಮಾವೇಶವನ್ನು ಹಾಗೂ ವಾರ್ಷಿಕ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕ ಕಾಲಕ್ಕೆ ತಕ್ಕಂತೆ ಕಲಿಕೆಯ ಸ್ವರೂಪ ಬದಲಾಗಿದ್ದು, ಪಠ್ಯೇತರ ಚಟು ವಟಿಕೆಗಳು ಮಹತ್ವ ಪಡೆದುಕೊಳ್ಳುತ್ತಿವೆ. ಅಂಕ ಗಳಿಕೆಯ ಜತೆ ಮಕ್ಕಳು ಇಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಎನ್.ಎಸ್.ಎಸ್.ನಂತಹ ಪಠ್ಯೇತರ ಚಟು ವಟಿಕೆಗಳಲ್ಲಿ ಮುಕ್ತವಾಗಿ ಪಾಲ್ಗೊಳ್ಳ ಬೇಕು ಎಂದು ತಿಳಿಸಿದರು.

ADVERTISEMENT

ಸ್ಕೌಟ್ಸ್ ಮತ್ತು ಗೈಡ್ಸ್ ತಾಲ್ಲೂಕು ಘಟಕದ ಅಧ್ಯಕ್ಷ ಮಂಜುನಾಥ ಇಟಗಿ ಮಾತನಾಡಿ, ಜೀವನದಲ್ಲಿ ಎದುರಾಗುವ ಸಮಸ್ಯೆ ನಿವಾರಿಸಿಕೊಂಡು ಹೋಗುವ ಶಕ್ತಿಯನ್ನು ಶಿಕ್ಷಣ ನೀಡುತ್ತದೆ. ಇತ್ತೀಚಿನ ದಿನಗಳಲ್ಲಿ ಜಾತಿ ಭೇದ ವಿಪರೀತವಾಗುತ್ತಿದ್ದು, ಮಕ್ಕಳಲ್ಲಿ ಜಾತೀಯತೆ ಭಾವನೆ ಬೆಳೆಸುವ ಚಟುವಟಿಕೆಗಳಿಂದ ಶಾಲೆ– ಕಾಲೇಜುಗಳು ದೂರವಿರಬೇಕು ಎಂದು ತಿಳಿಸಿದರು.

ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಜೆ.ಧರ್ಮಾಧಿಕಾರಿ ಮಾತನಾಡಿ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಉಪಯುಕ್ತ ಚಟುವಟಿಕೆ ಗಳನ್ನು ಕೈಗೊಳ್ಳಲು ಸಾರ್ವಜನಿಕರು ನೆರವು ನೀಡಬೇಕು ಎಂದು ಮನವಿ ಮಾಡಿದರು. ಸ್ಕೌಟ್ಸ್ ಮತ್ತು ಗೈಡ್ಸ್ ಡಿ.ಒ.ಸಿ ಶಿವಕುಮಾರ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಗಳ ವಿವಿಧ ಹಂತಗಳ ಪರೀಕ್ಷೆಗಳ ಕುರಿತು ತಿಳಿಸಿದರು.

ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಪುರ ಸ್ಕೃತ ಶಿಕ್ಷಕ ಎಂ.ಜಿ.ಕಿತ್ತೂರ ಅವರನ್ನು ಸನ್ಮಾನಿಸಲಾಯಿತು. ಎಂ.ಪಿ.ಶೀರನಹಳ್ಳಿ, ಭಾಗ್ಯಲಕ್ಷ್ಮಿ ಇನಾಮತಿ, ಎಚ್.ಎಚ್. ಸದರಬಾಯಿ, ಮಂಜುನಾಥ ಸಿರಬಡಗಿ, ಕಲಾವತಿ ಕುಷ್ಟಗಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.