ADVERTISEMENT

ರಸ್ತೆಗಳ ದುರವಸ್ಥೆ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಜುಲೈ 2017, 6:31 IST
Last Updated 27 ಜುಲೈ 2017, 6:31 IST
ಗಜೇಂದ್ರಗಡದ ಹಲವು ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಕ.ರ.ವೇ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
ಗಜೇಂದ್ರಗಡದ ಹಲವು ರಸ್ತೆಗಳನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿ ಕ.ರ.ವೇ ಕಾರ್ಯಕರ್ತರು ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು   

ಗಜೇಂದ್ರಗಡ: ಪಟ್ಟಣದ ಹಲವು ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಅವುಗಳನ್ನು ಶೀಘ್ರದಲ್ಲಿ ದುರಸ್ತಿ ಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಕ.ರ.ವೇ ತಾಲ್ಲೂಕು ಘಟಕದ ಅಧ್ಯಕ್ಷ ರಜಾಕ್ ಡಾಲಾಯತ್ ಮಾತನಾಡಿ ಪಟ್ಟಣದ ದುರ್ಗಾ ವೃತ್ತದಿಂದ ಕೊಳ್ಳಿಯವರ ಕ್ರಾಸ್ ವರೆಗಿನ ಮುಖ್ಯ ರಸ್ತೆ, ಬಸವೇಶ್ವರ ವೃತ್ತದಿಂದ ಪುರಸಭೆಗೆ ಹೋಗುವ ರಸ್ತೆಗಳು ಸಂಪೂರ್ಣ ಹಾಳಾಗಿವೆ. ರಸ್ತೆಯುದ್ದಕ್ಕೂ ಗುಂಡಿಗಳಿದ್ದು, ಈ ರಸ್ತೆಯಲ್ಲಿ ಶಾಲಾ ವಾಹನಗಳು, ವಿದ್ಯಾರ್ಥಿಗಳು, ವೃದ್ಧರು, ಗರ್ಭಿಣಿಯರು ಸಂಚರಿಸಲು ತುಂಬಾ ತೊಂದರೆಯಾಗುತ್ತಿದೆ ಎಂದರು.

ಮಳೆ ಬಂದರಂತೂ ಈ ರಸ್ತೆಯಲ್ಲಿ ಸಂಚರಿಸುವ ಪಾದಚಾರಿಗಳಿಗೆ ಕೆಸರಿನ ಮಜ್ಜನವಾಗುವುದು ಖಂಡಿತ. ಕಾಂಗ್ರೆಸ್ ಮತ್ತು ಬಿಜೆಪಿಯವರ ಆಂತರಿಕ ಕಿತ್ತಾಟದಲ್ಲಿ ಪಟ್ಟಣದ ಅಭಿವೃದ್ಧಿ ಕುಂಠಿತವಾಗುತ್ತಿದ್ದು, ಪುರಸಭೆ ಇದ್ದೂ ಇಲ್ಲದಂತಾಗಿದೆ ಎಂದು ಅವರು ಆರೋಪಿಸಿದರು.

ADVERTISEMENT

ಪುರಸಭೆ ಮುಖ್ಯಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಕಡೆ ಗಮನಹರಿಸಿ ಒಂದು ವಾರದೊಳಗಾಗಿ ರಸ್ತೆ ದುರಸ್ತಿಗೆ ಮುಂದಾಗಬೇಕು ಇಲ್ಲದಿದ್ದರೆ ಪುರಸಭೆಗೆ ಮುತ್ತಿಗೆ ಹಾಕಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ವೀರೇಶ ಶಿವಶಿಂಪಿಗೇರಿ, ಹುಸೇನ್ ಕವಲೂರ, ಮಾರುತಿ ಬಂಕದ, ನಾಗರಾಜ ಬಂಕದ, ನೀಲಪ್ಪ ಚಲವಾದಿ, ದ್ಯಾಮನಗೌಡ ಗೌಡರ, ರಾಘವೇಂದ್ರ ಮಾದರ, ಮೌಲಿಸಾಬ ಹವಾಲ್ದಾರ, ಮುತ್ತು ಪೂಜಾರ, ಆನಂದ ರಾಠೋಡ, ಮಹೇಂದ್ರ ಭಜೇಂತ್ರಿ, ವಿಶ್ವನಾಥ ಹೊಸಮನಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.