ADVERTISEMENT

ಸಂಭ್ರಮದ ನಡುವೆ ಗಣೇಶನಿಗೆ ವಿದಾಯ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2017, 5:21 IST
Last Updated 3 ಸೆಪ್ಟೆಂಬರ್ 2017, 5:21 IST

ಗದಗ: ಗದಗ–ಬೆಟಗೇರಿ ಅವಳಿನಗರ ಸೇರಿದಂತೆ ವಿವಿಧೆಡೆ ಶನಿವಾರ 9ನೇ ದಿನದ ಸಾರ್ವಜನಿಕ ಗಣೇಶ ಮೂರ್ತಿ ಗಳನ್ನು ವಿಸರ್ಜನೆ ಮಾಡಲಾಯಿತು. ಮೂರ್ತಿಗಳ ವಿಸರ್ಜನೆ ಹಿನ್ನೆಲೆ ವಿಶೇಷ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಗರದ ವಿವಿಧ ವಾರ್ಡ್‌ಗಳಲ್ಲಿ ಮಕ್ಕಳಿಗೆ ಸಾಂಸ್ಕೃತಿಕ ಕಾರ್ಯಕ್ರಮ, ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಸಂಸ್ಥೆಗಳಿಂದ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಗಳ ಮೆರವಣಿಗೆ ಸ್ಥಳೀಯ ಹುಯಿಲಗೋಳ ನಾರಾಯಣರಾವ್ ವೃತ್ತ, ಮೈಕ್ರೊ ಟವರ್, ಜೋಡ ಹನಮಂತ ದೇವರ ಗುಡಿ ರಸ್ತೆ ಮೂಲಕ ಹುಬ್ಬಳ್ಳಿ ರಸ್ತೆಯಲ್ಲಿ ಇರುವ ಮಾನ್ವಿ ಬಾವಿವರೆಗೆ ನಡೆಯಿತು. ಮೆರವಣಿಗೆ ವೇಳೆ ಯುವಕರು, ಮಕ್ಕಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಂಗೀತಕ್ಕೆ ಹೆಜ್ಜೆ ಹಾಕಿದರು.

ಲಕ್ಕುಂಡಿಯ ರಾಜರಾಜೇಶ್ವರಿ ಡೊಳ್ಳು ತಂಡದ ಕಲಾವಿದರು ಡೊಳ್ಳು ಕುಣಿತ ಪ್ರದರ್ಶಿಸಿ ಗಮನಸೆಳೆದರು. ಮುತ್ತೈದೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡರು. ಬಳಿಕ ನಗರದ 50 ಗಣೇಶ ಮೂರ್ತಿಗಳನ್ನು ಹುಬ್ಬಳ್ಳಿ ರಸ್ತೆಯಲ್ಲಿರುವ ಮಾನ್ವಿ ಅವರ ಬಾವಿಯಲ್ಲಿ ವಿಸರ್ಜಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.