ADVERTISEMENT

ಅತ್ಯಾಚಾರ ಪ್ರಕರಣ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2017, 6:59 IST
Last Updated 21 ಡಿಸೆಂಬರ್ 2017, 6:59 IST
ಹಾಸನ ನಗರದ ಹೇಮಾವತಿ ಪ್ರತಿಮೆ ಎದುರು ಸಿಐಟಿಯು ಹಾಗೂ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು
ಹಾಸನ ನಗರದ ಹೇಮಾವತಿ ಪ್ರತಿಮೆ ಎದುರು ಸಿಐಟಿಯು ಹಾಗೂ ವಿವಿಧ ದಲಿತಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು   

ಹಾಸನ: ವಿಜಯಪುರದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸಿಐಟಿಯು ಹಾಗೂ ವಿವಿಧ ದಲಿತ ಸಂಘಟನೆಗಳ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಮೆಣದ ಬತ್ತಿಯೊಂದಿಗೆ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆವರೆಗೂ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು.

‘ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ  ಬಾಲಕಿ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅತ್ಯಾಚಾರದಂತಹ ಪ್ರಕರಣಗಳನ್ನು ತಡೆಗಟ್ಟುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ADVERTISEMENT

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಎಚ್.ಆರ್. ನವೀನ್ ಕುಮಾರ್, ದಲಿತ ಸಂಘರ್ಷ ಸಮಿತಿ (ಭೀಮವಾದ) ರಾಜ್ಯ ಸಂಚಾಲಕ ನಾಗರಾಜ್ ಹೆತ್ತೂರು, ಮುಖಂಡರಾದ ಎಂ.ಸಿ.ಡೋಂಗ್ರೆ, ಮರಿಜೋಸೆಫ್, ಎಂ.ಜಿ.ಪೃಥ್ವಿ, ಮಂಜುನಾಥ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.