ADVERTISEMENT

ಆರೋಗ್ಯದ ಕಾಳಜಿ ಅಗತ್ಯ; ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2017, 7:04 IST
Last Updated 31 ಜನವರಿ 2017, 7:04 IST
ಆರೋಗ್ಯದ ಕಾಳಜಿ ಅಗತ್ಯ; ಸ್ವಾಮೀಜಿ
ಆರೋಗ್ಯದ ಕಾಳಜಿ ಅಗತ್ಯ; ಸ್ವಾಮೀಜಿ   

ಚನ್ನರಾಯಪಟ್ಟಣ: ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಆದಿಚುಂಚನಗಿರಿ ಶಾಖಾ ಮಠಾಧೀಶ ಶಂಭುನಾಥ ಸ್ವಾಮೀಜಿ ಹೇಳಿದರು.

ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಕೇಂದ್ರ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಸೋಮವಾರ ರಾಷ್ಟ್ರೀಯ ಕುಷ್ಠರೋಗ ಮಾಸಾಚರಣೆ, ಹುತಾತ್ಮ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಏರ್ಪಡಿಸಿದ್ದ ಕುಷ್ಠರೋಗ ನಿರ್ಮೂಲನಾ  ದಿನಾಚರಣೆಯಲ್ಲಿ ಅವರು ಆಶೀರ್ವಚನ ನೀಡಿದರು.

ಕುಷ್ಠರೋಗ ನಿವಾರಿಸಲು ಸೂಕ್ತ ಚಿಕಿತ್ಸೆ ಪಡೆಯಬೇಕು. ರೋಗಿಗಳನ್ನು ಗೌರವದಿಂದ ಕಾಣಬೇಕು. ದೀನ, ದಲಿತರ ಸೇವೆ ಮಾಡಲು ಆದ್ಯತೆ ನೀಡಬೇಕು. ಆದಿಚುಂಚನಗಿರಿ ಮಠದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿ ಸಲಾಗುತ್ತಿದೆ. ಇದರ ಪ್ರಯೋಜನವನ್ನು ಎಲ್ಲರು ಪಡೆದು ಕೊಳ್ಳಬೇಕು ಎಂದು ಹೇಳಿದರು.

ಶಾಸಕ ಸಿ.ಎನ್‌. ಬಾಲಕೃಷ್ಣ ಮಾತನಾಡಿ, ಗ್ರಾಮದ ಏಳಿಗೆಗೆ ಮಹಾತ್ಮಗಾಂಧೀಜಿ  ಹೆಚ್ಚು ಒತ್ತು ನೀಡಿದ್ದರು. ಗ್ರಾಮಗಳು ಅಭಿವೃದ್ಧಿ ಹೊಂದಿದರೆ ದೇಶ ಪ್ರಗತಿಪಥದತ್ತ ಸಾಗುತ್ತದೆ ಎಂಬ ಆಶಯ ಹೊಂದಿದ್ದರು ಎಂದರು.

ಹೋಬಳಿ ಕೇಂದ್ರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಮೂಲಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದರು.

ಕಬ್ಬಳಿಯ ಶಿವಪುತ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ತಹಶೀಲ್ದಾರ್‌ ಡಿ.ವಿದ್ಯಾವತಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೆಂಕಟೇಶ್‌, ಪರಿಸರವಾದಿ ಸಿ.ಎನ್‌.ಅಶೋಕ್‌, ಡಾ.ಟಿ.ಎಂ. ಮನೋಹರ್‌, ಡಾ.ಬಿ.ಡಿ. ಸತ್ಯ ನಾರಾ ಯಣ್‌, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಎಚ್‌.ಎನ್‌.ಮಹದೇವಪ್ರಸಾದ್‌, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಶೀತಲ್ ಕುಮಾರ್‌ ಇದ್ದರು.

ಸಾರ್ವಜನಿಕ ಸಂಪರ್ಕಾಧಿಕಾರಿ ವೈ.ಪಿ.ಧರ್ಮೇಂದ್ರ ಸ್ವಾಗತಿಸಿದರು. ಪಟ್ಟಣದ ಪ್ರಮುಖ ಬೀದಿಯಲ್ಲಿ ಆದಿಚುಂಚನಗಿರಿ ಪ್ರಥಮದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ವಿದ್ಯಾರ್ಥಿಗಳು, ಆದಿಚುಂಚನಗಿರಿ ನರ್ಸಿಂಗ್‌ ಕಾಲೇಜು ವಿದ್ಯಾರ್ಥಿಗಳು, ಶಾಲಿನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಾಗೃತಿ ಮೂಡಿಸುವ ಕುರಿತು ಮೆರವಣಿಗೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.