ADVERTISEMENT

ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ಬೆಂಬಲ: ಮುನಿಸ್ವಾಮಿ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2017, 7:32 IST
Last Updated 22 ನವೆಂಬರ್ 2017, 7:32 IST
ಮುನಿಸ್ವಾಮಿ
ಮುನಿಸ್ವಾಮಿ   

ಹಾಸನ: ರಾಜ್ಯ ಸರ್ಕಾರ್ ಅನೇಕ ಯೋಜನೆಗಳು ಪರಿಶಿಷ್ಟ ಸಮಾಜಕ್ಕೆ ಹೆಚ್ಚು ಅನುಕೂಲವಾಗಿದ್ದು, ಮುಂದಿನ ಚುನಾವಣೆಯಲ್ಲಿ ಜಿಲ್ಲೆಯ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ ಎಂದು ಕೆಪಿಸಿಸಿ ಸದಸ್ಯ ಮುನಿಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿರುವ ಹಿಂದುಳಿದ ಸಮುದಾಯದವರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಪರಿಶಿಷ್ಟರಿಗೆ ಹೆಚ್ಚಿನ ಅನುಕೂಲವಾಗಿದೆ. ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸಹಕಾರಿಯಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಆರ್. ಕೃಷ್ಣಕುಮಾರ್, ದೇಶದ ಸಂವಿಧಾನದ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಬಿಜೆಪಿ ಮುಖಂಡ ಗೋ. ಮಧುಸೂದನ್ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ನ. 22 ರಂದು ಮೈಸೂರಿನಲ್ಲಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ ಎಂದು ತಿಳಿಸಿದರು.

ADVERTISEMENT

‘ಅರಕಲಗೂಡು ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಸಂಬಂಧ ನಡೆಸುತ್ತಿರುವ ಪ್ರತಿಭಟನೆ ರಾಜಕೀಯ ಪ್ರೇರಿತವಾಗಿದೆ. ಬಿಜೆಪಿ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ದಲಿತ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ’ ಎಂದು ಆರೋಪಿಸಿದರು. ಪತ್ರಿಕಾಗೋಷ್ಠಿಯಲ್ಲಿ ದಲಿತ ಮುಖಂಡರಾದ ನಾರಾಯಣ್‌ದಾಸ್‌, ಶಂಕರರಾಜು, ಲಕ್ಷ್ಮಣ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.