ADVERTISEMENT

ಕಂದಾಯ ನಿರೀಕ್ಷಕನ ಅಮಾನತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2017, 9:01 IST
Last Updated 27 ಏಪ್ರಿಲ್ 2017, 9:01 IST

ಹಾಸನ: ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯ ಕಂದಾಯ ನಿರೀಕ್ಷಕರನ್ನು ಅಮಾನತ್ತು ಮಾಡುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿತು.ಬೆಳ್ಳೂರು ಗ್ರಾಮದಲ್ಲಿ ದಲಿತ ಜನಾಂಗದ ಕೆಂಚದಾಸಯ್ಯ ಎಂಬುವ ವರು 40 ವರ್ಷಗಳಿಂದ ಮನೆ ಕಟ್ಟಿ ಕೊಂಡು ವಾಸಿಸುತ್ತಿದ್ದರು. ಆದರೆ, ಜಯರಾಂ ನಕಲಿ ದಾಖಲೆ ಸೃಷ್ಟಿಸಿ ಜಮೀನು ತೆರವುಗೊಳಿಸುವಂತೆ ಒತ್ತಡ ತರುತ್ತಿದ್ದರು.

ಕರ್ತವ್ಯ ಲೋಪವೆಸಗಿರುವ ಕಂದಾಯ ನಿರೀಕ್ಷಕ ಜಯರಾಂ ವಿರುದ್ಧ ಎಸ್‌ಸಿ, ಎಸ್‌ಟಿ  ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದರಿಂದ ಸೇವೆ ಯಿಂದ ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ‘ಇತ್ತೀಚೆಗೆ ಜಯರಾಂ ಅದೇ ಊರಿನ ಕೆಲ ವ್ಯಕ್ತಿಗಳೊಂದಿಗೆ ಕೆಂಚದಾಸಯ್ಯನ ಮನೆ ಹತ್ತಿರ ಬಂದು ಬೆದರಿಕೆ ಹಾಕಿದ್ದರು. ಇದರಿಂದ ಮನನೊಂದ ಅವರ  ಮಗಳು ಜಯಲಕ್ಷ್ಮಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು’ ಎಂದು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಯಸಳೂರು ಪೊಲೀಸ್ ಠಾಣೆಯಲ್ಲಿ  ಜಯರಾಂ, ಗ್ರಾಮಲೆಕ್ಕಿಗ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ದೌರ್ಜನ್ಯ ಕ್ಕೊಳಗಾದ ಕೆಂಚದಾಸಯ್ಯನ ಕುಟುಂಬಕ್ಕೆ ಜಮೀನು ಮಂಜೂರು ಮಾಡಿಕೊಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಡಿಎಸ್ಎಸ್ ಜಿಲ್ಲಾ ಸಂಚಾಲಕ ಎಸ್.ಎನ್.ಮಲ್ಲಪ್ಪ, ಟಿ.ಕೆ.ದೇವರಾಜ್, ದಲಿತ ಮುಖಂಡರಾದ ಎಚ್.ಕೆ. ಸಂದೇಶ್, ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಪಿ.ಅಹಮ್ಮದ್ ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.