ADVERTISEMENT

ಕೃಷಿ ಇಲಾಖೆ ಅವ್ಯವಸ್ಥೆ ಬಗ್ಗೆ ಕಿಡಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2017, 9:59 IST
Last Updated 10 ಜೂನ್ 2017, 9:59 IST

ಹೆತ್ತೂರು:  ಹೆತ್ತೂರಿನ ಕೃಷಿ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ಹೇಳಿದರು. ಕೃಷಿ ಇಲಾಖೆ ಕಚೇರಿಗೆ ಶುಕ್ರವಾರ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಅಲ್ಲಿಯ ಅವ್ಯವಸ್ಥೆ ಕಂಡು ಸಿಬ್ಬಂದಿ ಮೇಲೆ ಕಿಡಿಕಾರಿದರು.

ಇಲಾಖೆಯಲ್ಲಿ ರೈತರಿಗೆ ವಿತರಿಸಲಾಗುವ ಸೌಲಭ್ಯ ಹಾಗೂ ಪರಿಕರಗಳ ಬಗ್ಗೆ ಮಾಹಿತಿ ತಿಳಿಸದೇ ಗೋಪ್ಯವಾಗಿ ಇಡಲಾಗಿದೆ. ಉಗ್ರಾಣದಲ್ಲಿ ಇರುವ ಸಲಕರಣೆಗಳನ್ನು ರೈತರಿಗೆ ವಿತರಿಸದೇ ನಿರ್ಲಕ್ಷ್ಯ ತೋರಲಾಗಿದೆ. ಈ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.
ನಂತರ ಹೆತ್ತೂರು ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿದರು.

ಶೌಚಾಲಯ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ  ಮುಖ್ಯೋಪಾಧ್ಯಾಯರಿಗೆ ಸೂಚಿಸಿದರು. ನಂತರ  ಬಿಸಿಊಟ ಮಾಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಗ್ರಾಮದ ವಿಧ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVERTISEMENT

ಸಾರ್ವಜನಿಕ ಒತ್ತಾಯದ ಮೇರೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಂಬುಲೆನ್ಸ್ ಸಮಸ್ಯೆ ಬಗ್ಗೆ ಜಿಲ್ಲಾಡಳಿತದ ಗಮನ ಸೆಳೆಯುವುದಾಗಿ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಉಜ್ಮಾ ರಿಜ್ವಿ, ಸುದರ್ಶನ, ಗ್ರಾಮ ಪಂಚಾಯಿತಿ ಸದಸ್ಯರಾದ ಕೃಷ್ಣಪ್ಪ, ಎಚ್.ಟಿ.ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.