ADVERTISEMENT

ಜನಸಂಖ್ಯೆ ಹೆಚ್ಚಳದಿಂದ ಅರಣ್ಯ ನಾಶ; ಆತಂಕ

​ಪ್ರಜಾವಾಣಿ ವಾರ್ತೆ
Published 20 ಜೂನ್ 2017, 8:56 IST
Last Updated 20 ಜೂನ್ 2017, 8:56 IST

ಅರಕಲಗೂಡು: ‘ಹೆಚ್ಚುತ್ತಿರುವ ಜನಸಂಖ್ಯೆಯಿಂದಾಗಿ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು, ಇದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಶ್ರೀಧರ್‌ ತಿಳಿಸಿದರು.

ತಾಲ್ಲೂಕಿನ ಮಲ್ಲಿಪಟ್ಟಣ ಸರ್ಕಾರಿ ಪ್ರೌಢಶಾಲೆ ಹಾಗೂ ಧರ್ಮಸ್ಥಳ ಗ್ರಾಮಾಬಿವೃದ್ಧಿ ಯೋಜನೆಯ ಕಸಬಾ ವಲಯದ ಸಹಯೋಗದಲ್ಲಿ ಈಚೆಗೆ ಏರ್ಪಡಿಸಿದ್ದ ಬೀಜದ ಉಂಡೆ
ತಯಾರಿ ಕಾರ್ಯಕ್ರಮದಲ್ಲಿ  ಮಾತನಾಡಿದರು.

ಅರಣ್ಯದ ಮಹತ್ವ ಅರಿತು ಅದನ್ನು ಉಳಿಸಿ ಬೆಳೆಸಿದಾಗ ಮಾತ್ರ ಪರಿಸರದಲ್ಲಿ ಸಮತೋಲನ ಉಂಟಾಗಿ, ಮನುಷ್ಯನ ಬದುಕು ಹಸನಾಗಲು ಸಾಧ್ಯ. ಈ ನಿಟ್ಟಿನಲ್ಲಿ ಸಸಿಗಳನ್ನು ಬೆಳೆಸಲು ಪ್ರತಿಯೊ ಬ್ಬರೂ  ಮುಂದಾಗಬೇಕಿದೆ ಎಂದರು.

ADVERTISEMENT

ಸಂಸ್ಥೆಯ ಯೋಜನಾಧಿಕಾರಿ ಜಯಂತಿ ಮಾತನಾಡಿ, ಸಂಸ್ಥೆಯಿಂದ ಒಂದು ತಿಂಗಳು ಪರಿಸರ ದಿನ ಹಮ್ಮಿಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರು ಕೈಜೋಡಿಸುವ ಮೂಲಕ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮುಖ್ಯಶಿಕ್ಷಕ ಶಿವಪ್ರಕಾಶ್‌, ಅರಣ್ಯ ಇಲಾಖೆಯ ರಮೇಶ್‌ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಬೀಜದ ಉಂಡೆ ತಯಾರಿ ಮತ್ತು ಅದರ ಮಹತ್ವ ಕುರಿತು ಮಾಹಿತಿ ನೀಡಲಾಯಿತು. ತಾಲ್ಲೂಕಿನ ಹುಲಿಕಲ್‌ ಹಾಗೂ ಹೆಬ್ಬಾಲೆ ಗ್ರಾಮಗಳ ಸರ್ಕಾರಿ ಪ್ರೌಢಶಾಲೆಗಳಲ್ಲೂ ಬೀಜದ ಉಂಡೆ ತಯಾರಿ ಕುರಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

10ಸಾವಿರ ಬೀಜದುಂಡೆ ತಯಾರಿ ಗುರಿ
ಶ್ರವಣಬೆಳಗೊಳ: ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ 10 ಸಾವಿರ ಬೀಜದುಂಡೆ ತಯಾರಿ ಗುರಿಯನ್ನು ಹೊಂದಿದ್ದು, ಈಗಾಗಲೇ 4,800 ವಿವಿಧ ತಳಿಯ ಬೀಜದುಂಡೆಗಳನ್ನು ತಯಾರಿಸಿ ಶಾಲೆಯ ಆವರಣ, ದೇವಸ್ಥಾನದ ಆವರಣ ಹಾಗೂ ರೈತರ ಹೊಲದ ಬದುವಿನಲ್ಲಿ ನಾಟಿ ಮಾಡಲಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸಾವಿತ್ರಿ ಹೇಳಿದರು.

ಹೋಬಳಿಯ ಕುಂಬೇನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಈಚೆಗೆ ಹಮ್ಮಿಕೊಂಡಿದ್ದ ಬೀಜದುಂಡೆ ತಯಾರಿ ಹಾಗೂ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕುಂಬೇನಹಳ್ಳಿ ಶಾಲೆ ಮುಖ್ಯಶಿಕ್ಷಕ ಲೋಕೇಶ್‌ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕೃಷಿ ಮೇಲ್ವಿಚಾರಕರಾಕ ವಿನಾಯಕ್, ಒಕ್ಕೂಟದ ಅಧ್ಯಕ್ಷ ಕೃಷ್ಣೇಗೌಡ, ವಲಯದ ಮೇಲ್ವಿಚಾರಕ ಸುರೇಂದ್ರ ಮಡಿವಾಳ್‌, ಸೇವಾ ಪ್ರತಿನಿಧಿ ನಾರಾಯಣ್, ಉಪಸ್ಥಿತರಿದ್ದರು. ಸಂಘದ ಸದಸ್ಯರಿಂದ 2000 ಹಲಸು, ಮಾವು, ಹೊಂಗೆ, ಹುಣಸೆ ಬೀಜದುಂಡೆಗಳನ್ನು ತಯಾರಿಮಾಡಿ ಸದಸ್ಯರಿಗೆ ವಿತರಣೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.