ADVERTISEMENT

ನವಿಲುಗಳ ಮಾರಣಹೋಮ ನಿಲ್ಲಿಸಿ; ಗ್ರಾಮಸ್ಥರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2017, 8:30 IST
Last Updated 18 ಸೆಪ್ಟೆಂಬರ್ 2017, 8:30 IST

ಬೇಲೂರು: ‘ತಾಲ್ಲೂಕಿನ ಮಾಳೇಗೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನವಿಲುಗಳು ಮಾರಣಹೋಮ ನಡೆಯುತ್ತಿದ್ದು, ಅರಣ್ಯ ಇಲಾಖೆ ಇದನ್ನು ತಡೆಗಟ್ಟಲು ಕ್ರಮಕೈಗೊಳ್ಳಬೇಕು’ ಎಂದು ಮಾಳೇಗೆರೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

‘ಮಾಳೇಗೆರೆ ಮತ್ತು ಚಂದನಹಳ್ಳಿ ಸುತ್ತಮುತ್ತಲ ಪ್ರದೇಶಗಳಿಗೆ ನಿತ್ಯ ಮುಂಜಾನೆ 5.30ರ ಹೊತ್ತಿಗೆ ಬರುವ ಕೆಲ ಹಕ್ಕಿಪಿಕ್ಕಿ ಜನಾಂಗದವರು ನವಿಲುಗಳನ್ನು ಭೇಟೆಯಾಡಿ ಅದರ ಮಾಂಸವನ್ನು ತಿನ್ನುವುದಲ್ಲದೆ, ಅದರ ರೆಕ್ಕೆಗಳನ್ನು ಕಿತ್ತು ಮಾರಾಟ ಮಾಡುತ್ತಿದ್ದಾರೆ.

ಇದರಿಂದಾಗಿ ನವಿಲುಗಳ ಸಂತತಿ ದಿನೇದಿನೇ ನಶಿಸುತ್ತಿದೆ. ಅರಣ್ಯ ಇಲಾಖೆಗೆ ಈ ವಿಚಾರ ತಿಳಿದಿದ್ದರೂ ಕ್ರಮಕೈಗೊಳ್ಳುತ್ತಿಲ್ಲ. ನವಿಲುಗಳ ಹತ್ಯೆ ತಡೆಗಟ್ಟುವಂತೆ ಆಗ್ರಹಿಸಿ ಸೆ. 18ರಂದು ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು’ ಎಂದು ಗ್ರಾಮದ ಮುಖಂಡ ಎಂ.ಎಸ್‌.ಚಂದ್ರಶೇಖರಗೌಡ ಎಚ್ಚರಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.