ADVERTISEMENT

ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಇಲ್ಲ

ಎಸ್‌ಸಿ, ಎಸ್‌ಟಿ ಉಪಯೋಜನೆ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಡಿ.ಸಿ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 10:24 IST
Last Updated 16 ಮಾರ್ಚ್ 2018, 10:24 IST

ಹಾಸನ: ಪ್ರಸಕ್ತ ಆರ್ಥಿಕ ವರ್ಷ ಕೊನೆ ಹಂತದಲ್ಲಿದ್ದು, ಪರಿಶಿಷ್ಟ ಜಾತಿ ಹಾಗೂ ಪಂಗಡ ಉಪಯೋಜನೆಯಡಿ ಕೆಲವು ಇಲಾಖೆಗಳ ಪ್ರಗತಿ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಅದನ್ನು ತುರ್ತಾಗಿ ಸರಿಪಡಿಸಿಕೊಂಡು ಮಾರ್ಚ್‌ 20ರ ಒಳಗೆ ಮಾಹಿತಿ ನೀಡಿ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ ಹಾಗೂ ಪಂಗಡ ಉಪಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ತಿಂಗಳು ಇಲಾಖೆಗಳ ಪ್ರಗತಿ ಅವಲೋಕಿಸಿದಾಗ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿದ್ದು, ಇನ್ನೂ ಕೆಲವು ಇಲಾಖೆಗಳ ಪ್ರಗತಿಯಲ್ಲಿ ಕುಂಠಿತವಾಗಿದೆ ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ADVERTISEMENT

ಕಳೆದ ಸಭೆಗೆ ಹೊಲಿಸಿದರೆ ಕೆಲ ಇಲಾಖೆಗಳ ಪ್ರಗತಿಯಲ್ಲಿ ಸುಧಾರಣೆ ಕಂಡು ಬಂದಿದ್ದು, ಇನ್ನು ಇಲಾಖೆಗಳ ಪ್ರಗತಿ ಸುಧಾರಿಸಬೇಕಿದೆ. ಎಲ್ಲಾ ಇಲಾಖೆಗಳು ಶೇ 100 ರಷ್ಟು ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ. ಜಾನಕಿ ಅವರು, ಸಣ್ಣ ನೀರಾವರಿ ಇಲಾಖೆಯಲ್ಲಿ ಕೈಗೊಂಡಿರುವ ಕಾಮಗಾರಿ ಹಾಗೂ ಫಲಾನುಭವಿಗಳ ಪಟ್ಟಿಯನ್ನು ಸಲ್ಲಿಸುವಂತೆ ಅಧಿಕಾರಿಗೆ ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶ್ರೀಧರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಂಕರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.