ADVERTISEMENT

ಪ್ರಜಾಪ್ರಭುತ್ವದ ಮೌಲ್ಯ ಅರ್ಥೈಸಿಕೊಳ್ಳಿ

ಮೈಸೂರು ವಿ.ವಿ ಪ್ರಾಧ್ಯಾಪಕ ಜಿ.ಟಿ.ರಾಮಚಂದ್ರಪ್ಪ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 10:58 IST
Last Updated 26 ಏಪ್ರಿಲ್ 2018, 10:58 IST
ಹಾಸನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು
ಹಾಸನ ಸರ್ಕಾರಿ ಕಲಾ ಕಾಲೇಜಿನಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು   

ಹಾಸನ: ‘ಪ್ರಜಾಪ್ರಭುತ್ವ ವ್ಯವಸ್ಥೆಯೊಳಗಿ ರುವ ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥೈಸಿಕೊಳ್ಳಬೇಕು’ ಎಂದು ಮೈಸೂರು ವಿಶ್ವವಿದ್ಯಾನಿಲಯ ಮಾನಸಗಂಗೋತ್ರಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ. ಜಿ.ಟಿ.ರಾಮಚಂದ್ರಪ್ಪ ಸಲಹೆ ನೀಡಿದರು.

ನಗರದ ಸರ್ಕಾರಿ ಕಲಾ ಕಾಲೇಜು ಸಭಾಂಗಣದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ಹಾಗೂ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಕಾಲಮಾನದಲ್ಲಿ ವಿಕೇಂದ್ರೀ ಕರಣ ವ್ಯವಸ್ಥೆಗೆ ಹತ್ತಿರದಲ್ಲಿದ್ದು, ಪ್ರತಿಯೊಬ್ಬರಲ್ಲೂ ಸಮಾನತೆ ಬಂದಾಗ ಅದೊಂದು ಅರ್ಥಪೂರ್ಣ ವ್ಯವಸ್ಥೆಯಾಗಿ ರೂಪುಗೊಳ್ಳುತ್ತದೆ. ಹಾಗಿದ್ದಾಗ ಮಾತ್ರ ಮುಂದಿನ ಆಯೋಜನೆ ಕುರಿತು ಕನಸು ಕಾಣಲು ಸಾಧ್ಯ. ಹೊಸ ಆಯೋಜನೆಗಳು ಅನುಷ್ಠಾನಕ್ಕೆ ಬರಲು ಸಾಧ್ಯ ಎಂದು ಹೇಳಿದರು.

ADVERTISEMENT

ಮೈಸೂರು ಮುಕ್ತಗಂಗೋತ್ರಿಯ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಪಕ ಆನಂದಗೌಡ ಮಾತನಾಡಿ, ಒಂದು ಗ್ರಾಮ ಅಭಿವೃದ್ಧಿ ಹೊಂದಬೇಕಾ ದರೆ ಅಲ್ಲಿಯ ಆದಾಯ ಹೆಚ್ಚಬೇಕು. ಜನರಲ್ಲಿ ಸಹಭಾಗಿತ್ವ ಬರಬೇಕು. ಜತೆಗೆ ಗ್ರಾಮ ಸಂಘಟನೆ ಆಗುವುದರ ಮೂಲಕ ವಿಕೇಂದ್ರೀಕರಣ ಆಗುತ್ತದೆ ಎಂದರು.

ಗ್ರಾಮದ ಮಹಿಳೆಯರ ಸಬಲೀಕರ ಣದ ಜತೆಗೆ ಶಿಕ್ಷಣದಲ್ಲಿ ಅಭಿವೃದ್ಧಿ ಹೊಂದಬೇಕು. ಸರ್ಕಾರ ಹೊಸ ಹೊಸ ಯೋಜನೆ ಆಯೋಜಿಸಿಸುತ್ತಿದ್ದು, ಅದು ಅನುಷ್ಠಾನಗೊಳ್ಳಬೇಕಾದಲ್ಲಿ ಗ್ರಾಮದ ಪ್ರತಿಯೊಬ್ಬ ಅಭ್ಯರ್ಥಿಯು ಶಿಕ್ಷಣದಲ್ಲಿ ಅಭಿವೃದ್ಧಿ ಹೊಂದಿ ಅದರ ಅನುಕೂಲತೆ ಪಡೆದುಕೊಳ್ಳುವಲ್ಲಿ ಮುಂದಾಗಬೇಕು ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಿ.ಜಿ.ಕೃಷ್ಣೇಗೌಡ ಮಾತನಾಡಿ, ಸರ್ಕಾರದ ಯೋಜನೆಗಳು ಉಪಯುಕ್ತವಾಗಿದ್ದು, ಅದರ ಅನುಕೂಲತೆ ಪಡೆದುಕೊಳ್ಳಲು ಪ್ರತಿಯೊಬ್ಬರು ಜ್ಞಾನವಂತರಾಗಬೇಕು. ಪ್ರಶ್ನೆ ಮಾಡುವ ಸಾಮರ್ಥ್ಯ ಕರಗತ ಮಾಡಿಕೊಳ್ಳಬೇಕು. ಬೇಕು-ಬೇಡಗಳನ್ನು ತೀರ್ಮಾನಿಸುವ ಛಲ ಹೊಂದಬೇಕು. ಆಗ ಮಾತ್ರ ಸರ್ವಾಂಗೀಣ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಎಲ್ಲರಿಗೂ ಮತದಾನದ ಪ್ರತಿಜ್ಞಾವಿಧಿ ಯನ್ನು ರಾಜ್ಯಶಾಸ್ತ್ರ ವಿಭಾಗದ ಪ್ರೊ.ಕೆ.ವಿ.ಪಾರ್ಥೇಶ್ ಬೋಧಿಸಿದರು.

ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಉದಯಕುಮಾರ್, ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಕೆ.ಎನ್.ರಮೇಶ್, ಡಿ.ಜಯದೇವಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.