ADVERTISEMENT

ಬೇಡಿಕೆ ಈಡೇರಿಕೆಗಾಗಿ ತರಗತಿ ಬಹಿಷ್ಕಾರ

ಸರ್ಕಾರಿ ವಿಜ್ಞಾನ ಕಾಲೇಜಿನ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2017, 9:52 IST
Last Updated 22 ಮಾರ್ಚ್ 2017, 9:52 IST

ಹಾಸನ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಮಂಗಳವಾರ ಸರ್ಕಾರಿ ವಿಜ್ಞಾನ ಕಾಲೇಜಿನ ಅತಿಥಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರು ಬೆಂಗಳೂರು ಚಲೋ ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ವಿಜ್ಞಾನ ಕಾಲೇಜಿನ ಅಥಿತಿ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಬೆಂಬಲ ಸೂಚಿಸಿದರು. 

1994ರಿಂದ 95ನೇ ಸಾಲಿನ ಹಾಗೂ 2016– 17ನೇ ಸಾಲಿನ ಅರೆಕಾಲಿಕ ಹಾಗೂ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡುವುದನ್ನು ಬಿಟ್ಟು ಇತರೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.

ಸರ್ಕಾರ ಇಂತಹ ನಡೆಯಿಂದ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಬೀದಿ ಪಾಲಾಗುತ್ತಾರೆ. ಅಲ್ಲದೆ, ಕುಟುಂಬ ನಿರ್ವಹಿಸು
ವುದು ಕಷ್ಟ ಸಾಧ್ಯವಾಗಿದೆ. ಆದ್ದರಿಂದ ಅತಿಥಿ ಉಪನ್ಯಾಸಕರಿಗೆ ಸಾಮಾಜಿಕ ಸೇವಾ ಭದ್ರತೆ ಕಲ್ಪಿಸಬೇಕು ಮತ್ತು ನೇಮಕ ಮಾಡಿಕೊಳ್ಳ
ಬೇಕು ಎಂದು ಅವರು ಒತ್ತಾಯಿಸಿದರು. ಉಪನ್ಯಾಸಕರಾದ ಸುರೇಶ್, ವಿಕ್ರಂ, ಶಶಿಕುಮಾರ್, ನಳಿನಿ, ಜಲಜಾ, ಸಿಂಧೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.