ADVERTISEMENT

ವಿದ್ಯೆ ಅಪಹರಿಸಲಾಗದ ಅಮೂಲ್ಯ ಸಂಪತ್ತು

ವಿಘ್ನೇಶ್ವರ ಬಾಲಿಕಾ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ

​ಪ್ರಜಾವಾಣಿ ವಾರ್ತೆ
Published 2 ಜನವರಿ 2017, 10:53 IST
Last Updated 2 ಜನವರಿ 2017, 10:53 IST

ಶನಿವಾರಸಂತೆ: ಮನುಷ್ಯ ಜೀವನದಲ್ಲಿ ಗಳಿಸಿದ ವಿದ್ಯೆಯನ್ನು ಯಾರೂ ಅಪಹರಿಸಲಾಗದ ಅಮೂಲ್ಯ ಸಂಪತ್ತು. ವಿದ್ಯಾರ್ಥಿಗಳು ಈ ಸಂಪತ್ತನ್ನು ನಿರಂತರ ಅಧ್ಯಯನದಿಂದ ಹಾಗೂ ಪರಿಶ್ರಮ ದಿಂದ ಗಳಿಸಿಕೊಳ್ಳಬೇಕು ಎಂದು ವಿಘ್ನೇಶ್ವರ ವಿದ್ಯಾಸಂಸ್ಥೆ ಉಪಾಧ್ಯಕ್ಷ ಕೆ.ಈ.ಕೃಷ್ಣರಾಜ್ ಅಭಿಪ್ರಾಯಪಟ್ಟರು.

ಪಟ್ಟಣದ ವಿಘ್ನೇಶ್ವರ ಬಾಲಿಕಾ ಪ್ರೌಢಶಾಲೆ, ಬಾಲಿಕಾ ಪದವಿ ಪೂರ್ವ ಕಾಲೇಜು ಹಾಗೂ ಗೋಲ್ಡನ್ ಸ್ಕೂಲ್‌ನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಅತಿಥಿ ಯಸಳೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಾಸು ಬೋರೆಗೌಡ ಮಾತನಾಡಿ, ವಿದ್ಯಾರ್ಥಿ ಗಳ ಭವಿಷ್ಯ ಸುಂದರವಾಗಿ ರೂಪು ಗೊಳ್ಳಲು ಉತ್ತಮ ಶಿಕ್ಷಣ ಅತ್ಯಗತ್ಯ. ಆಧುನಿಕತೆಯ ಭರಾಟೆಯಲ್ಲಿ ಶಿಕ್ಷಣದ ಮೌಲ್ಯ ಕುಸಿಯುತ್ತಿದೆ. ನೈತಿಕತೆ ಶಿಕ್ಷಣದ ಅವಿಭಾಜ್ಯ ಅಂಗವಾಗಿದ್ದು ಶಿಕ್ಷಕರು ವಿದ್ಯಾರ್ಥಿಗಳಿಗೆ ನೈತಿಕತೆ, ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಬೇಕು ಎಂದರು.

ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಕೆ.ಸುಬ್ರಹ್ಮಣ್ಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಸದಸ್ಯ ಅನಂತಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮ್ಮದ ಗೌಸ್, ದುಂಡಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಜೆ. ಗಿರೀಶ್, ಸಂಪನ್ಮೂಲ ವ್ಯಕ್ತಿ ನಿರ್ಮಲಾ, ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿ.ಎನ್.ಬೆಳ್ಳಿ ಯಪ್ಪ ಮಾತನಾಡಿದರು.

ಪ್ರಾಂಶುಪಾಲ ಟಿ.ಪಿ.ಶಿವಪ್ರಕಾಶ್, ಉಪನ್ಯಾಸಕರಾದ ಕೆ.ಪಿ.ಜಯ ಕುಮಾರ್, ಮಹಮ್ಮದ್ ಸರ್ಫ್‌ರಾಜ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಬಾನು ರಿಜ್ವಾನ್, ವಿದ್ಯಾಸಂಸ್ಥೆ ನಿರ್ದೇಶಕರಾದ ನಿತ್ಯಾನಿಧಿ, ದೇವರಾಜ್, ಗೋವಿಂದೇ ಗೌಡ, ಗಣೇಶ್, ರಾಮಣ್ಣ ಇದ್ದರು.ಕೊನೆಗೆ ವಿದ್ಯಾರ್ಥಿನಿಯರು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.