ADVERTISEMENT

‘ಸರ್ಕಾರಿ ಶಾಲೆ ಮುಚ್ಚಬೇಡಿ’

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2017, 6:51 IST
Last Updated 4 ನವೆಂಬರ್ 2017, 6:51 IST

ಹಾಸನ: ನಗರದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಕನ್ನಡ ವಿಭಾಗದ ಮುಖ್ಯಸ್ಥ ಟಿ. ಪಿ. ಪುಟ್ಟರಾಜು, ನಾಡಿನ ಜಲ, ನೆಲ. ಸಂಸ್ಕೃತಿ ರಕ್ಷಣೆ ಎಲ್ಲರ ಹೊಣೆ. ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂಬ ಕಾರಣಕ್ಕೆ ಸರ್ಕಾರಿ ಕನ್ನಡ ಶಾಲೆಗಳು ಮುಚ್ಚುವುದು ಸರಿಯಲ್ಲ’ ಎಂದು ಅವರು ಪ್ರತಿಪಾದಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಹೊನ್ನಶೆಟ್ಟಿಹಳ್ಳಿ ಗಿರಿರಾಜ್, ಮಕ್ಕಳಿಗೆ ಅಕ್ಷರ ಜ್ಞಾನವಿದ್ದರೆ ಸಾಲದು. ಅದರ ಜತೆ ಸಂಸ್ಕಾರವೂ ಇರಬೇಕು ಎಂದರು. ಡೀನ್ ವೈ.ಪಿ.ಮಲ್ಲೇಗೌಡ ಅವರು, ಗಡಿ, ಭಾಷಾ ಸಮಸ್ಯೆಗಳು ಜನರನ್ನು ಕಾಡುತ್ತಿವೆ ಎಂದರು. ಕನ್ನಡ ಸಂಘಟನೆಗಳು ರಾಜ್ಯದ ನೆಲ, ಜಲಕ್ಕಾಗಿ ಹೋರಾಡುವುದು ಅನಿವಾರ್ಯ ಎಂದರು. ಚನ್ನಯ್ಯ ಸ್ವಾಗತಿಸಿದರು, ಚಂದ್ರಕಲಾ ವಂದಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಈ ಸಂದರ್ಭದಲ್ಲಿ ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT