ADVERTISEMENT

ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ

ವಿಶ್ವ ರಕ್ತದಾನಿಗಳ ದಿನ ಕಾರ್ಯಕ್ರಮ; ಹಿಮ್ಸ್‌ ನಿರ್ದೇಶಕ ರವಿಕುಮಾರ್‌ ಸಲಹೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2018, 9:11 IST
Last Updated 18 ಜೂನ್ 2018, 9:11 IST

ಹಾಸನ: ಯುವಜನರು ಹಾಗೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದು ಹಿಮ್ಸ್ ನಿರ್ದೇಶಕ ಡಾ. ಬಿ.ಸಿ.ರವಿಕುಮಾರ್ ಹೇಳಿದರು.

ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಆರೋಗ್ಯ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ಪ್ರತಿಬಂಧಕ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಯುವ ರೆಡ್ ಕ್ರಾಸ್ ಘಟಕ ಹಿಮ್ಸ್ ಆಶ್ರಯದಲ್ಲಿ ಆಯೋಜಿಸಿದ್ದ ‘ವಿಶ್ವ ರಕ್ತದಾನಿಗಳ ದಿನಾಚರಣೆ’ ಮತ್ತು ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ರಕ್ತದಾನ ದಿನಾಚರಣೆ ಅರ್ಥಪೂರ್ಣವಾಗಿಸಲು ದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ನೀಡಬೇಕು. ಇದರಿಂದ ನೂರಾರು ಜೀವ ಉಳಿಸಲು ಸಾಧ್ಯವಾಗುತ್ತದೆ ಎಂದರು.

ADVERTISEMENT

ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ಮೋಹನ್ ಮಾತನಾಡಿ, ವಿಶ್ವ ರಕ್ತದಾನಿಗಳ ದಿನವನ್ನು 2015ರಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತು. ಇದು ಸ್ವಇಚ್ಚೆಯಿಂದ ರಕ್ತ ನೀಡುವ ದಾನಿಗಳಿಗೆ ಅಭಿನಂದನೆ ಹೇಳಿ ಗೌರವಿಸುವ ಕೆಲಸ ಮಾಡಲು ಪ್ರೇರಣೆ ನೀಡುತ್ತದೆ ಎಂದರು.

ಯುವಜನರಿಗೆ ರಕ್ತದಾನದ ಬಗ್ಗೆ ಅರಿವು ಮೂಡಿಸಿ, ಒಬ್ಬರು ನೀಡುವ ರಕ್ತದಿಂದ ಮೂರು ವ್ಯಕ್ತಿಗಳ ಜೀವ ಉಳಿಸಲು ಸಾಧ್ಯ ಎಂದು ತಿಳಿಸಿದರು.

ಹೆಚ್ಚು ಬಾರಿ ರಕ್ತದಾನ ಮಾಡಿದ ಮೋಹನ್ ಕುಮಾರ್ ಚವ್ಹಾನ್, ವಿಷ್ಣು ಸ್ವರೂಪ, ವೈದ್ಯಕೀಯ ವಿದ್ಯಾರ್ಥಿ ಅಶೋಕ ಅವರನ್ನು ಗೌರವಿಸಲಾಯಿತು.

ಹಿಮ್ಸ್ ಅಧ್ಯಾಪಕರಾದ ಡಾ. ಸುರೇಶ, ಡಾ.ಈಶ್ವರ್ ಪ್ರಸಾದ್, ಡಾ.ಪುರುಷೋತ್ತಮ್, ಡಾ. ಸಿದ್ದರಾಮು, ಡಾ.ದೀಪಕ್, ಡಾ. ವೆಂಕಟೇಶ್, ಡಾ.ಪ್ರಕಾಶ, ಜಿಲ್ಲಾ ರೆಡ್ ಕ್ರಾಸ್ ನಿರ್ದೇಶಕಿ ನಿರ್ಮಲಾ ಸೇರಿ 35 ವಿದ್ಯಾರ್ಥಿಗಳು ರಕ್ತದಾನ ಮಾಡಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್.ಎಂ.ಶಿವಣ್ಣ, ವೈದ್ಯಕೀಯ ಅಧೀಕ್ಷಕ ಡಾ.ಕೆ. ಶಂಕರ್, ನಿವಾಸಿ ವೈದ್ಯಾಧಿಕಾರಿ ಡಾ.ವಿ.ಆರ್. ಕೃಷ್ಣಮೂರ್ತಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ನಾಗೇಶ್ ಆರಾಧ್ಯ, ರೆಡ್ ಕ್ರಾಸ್ ಕಾರ್ಯದರ್ಶಿ ಅನುಗನಾಳು ಕೃಷ್ಣಮೂರ್ತಿ, ಖಚಾಂಚಿ ಯು.ಜೆ.ಮಲ್ಲಿಕಾರ್ಜುನ್, ಕೃಷ್ಣಪ್ಪ, ಡಾ. ನಾಗಲಕ್ಷ್ಮಿ, ನಿಚಿತಾ ಕುಮಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.