ADVERTISEMENT

ಹೆಣ್ಣುಮಕ್ಕಳ ನಿರ್ಲಕ್ಷ್ಯ ಸಲ್ಲದು

ತವರು ಚಾರಿಟಬಲ್ ಟ್ರಸ್ಟ್ ವಾರ್ಷಿಕೋತ್ಸವ, ಉಪವಿಭಾಗಾಧಿಕಾರಿ ನಾಗರಾಜು ಸಲಹೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2017, 5:46 IST
Last Updated 6 ಫೆಬ್ರುವರಿ 2017, 5:46 IST

ಹಾಸನ: ಯಾವುದೇ ಕಾರಣಕ್ಕೂ ಹೆಣ್ಣು ಮಕ್ಕಳನ್ನು  ನಿರ್ಲಕ್ಷ್ಯ ಮಾಡಬಾರದು ಎಂದು ಉಪವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜು ತಿಳಿಸಿದರು.
ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ತವರು ಚಾರಿಟಬಲ್ ಟ್ರಸ್ಟ್ 11ನೇ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹಿಳೆ ಸಹ ಪುರುಷನಂತೆ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾಳೆ.  ಈದಿನಗಳಲ್ಲಿ ಹೆಣ್ಣು ಮಕ್ಕಳನ್ನು ನಿರ್ಲಕ್ಷ್ಯದಿಂದ ನೋಡಲಾಗುತ್ತಿದೆ. ಹೆಣ್ಣು ಮಕ್ಕಳಿಗೆ ಆದ್ಯತೆ ನೀಡಲು ಸರ್ಕಾರದ ಕಾರ್ಯಕ್ರಮಗಳನ್ನು ಸರಿಯಾದ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಉದ್ಘಾಟಿಸಿದ ಕಾನೂನು ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್, ತವರು ಚಾರಿಟಬಲ್ ಟ್ರಸ್ಟ್ 11 ವರ್ಷಗಳಿಂದ ಉತ್ತಮ ಕೆಲಸ  ಮಾಡುತ್ತಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಹಣದಿಂದ ಸಂತೋಷ ಭರಿಸಲು ಸಾಧ್ಯವಿಲ್ಲ. ಸಮಾಜಮುಖಿ ಕೆಲಸ ಮಾತ್ರ ತೃಪ್ತಿ ಕೊಡುತ್ತದೆ ಎಂದು ಕಿವಿಮಾತು ಹೇಳಿದರು.

ತವರು ಚಾರಿಟಬಲ್ ಟ್ರಸ್ಟ್‌ ವತಿಯಿಂದ ಮಕ್ಕಳಿಲ್ಲದ ದಂಪತಿಗೆ ಮಗುವನ್ನು ದತ್ತು ಕೊಡುವುದರ ಮೂಲಕ ಸಂಭ್ರಮ ಆಚರಿಸಲಾಯಿತು. 
ಬೆಂಗಳೂರಿನ ರಾಧಾ ನಾಗೇಶ್, ಪತ್ರಕರ್ತ ರವಿ ನಾಕಲಗೂಡು ಇದ್ದರು.   ಚಾಂದಿನಿ ಹಾಸನ ಪಾರ್ಥಿಸಿದರು. ಟ್ರಸ್ಟ್‌ನ ಸಿಬ್ಬಂದಿ ಹಾಜರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.