ADVERTISEMENT

100 ಬೀದಿನಾಯಿ ಸೆರೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2017, 8:17 IST
Last Updated 3 ಸೆಪ್ಟೆಂಬರ್ 2017, 8:17 IST

ಬೇಲೂರು: ಪಟ್ಟಣದಲ್ಲಿ ಮಿತಿಮೀರಿದ ನಾಯಿ ಹಾವಳಿಯನ್ನು ತಡೆಗಟ್ಟುವ ಸಲುವಾಗಿ ಶನಿವಾರದಿಂದ ಬೀದಿ ನಾಯಿಗಳನ್ನು ಹಿಡಿಯಲಾಗುತ್ತಿದೆ. ಪುರಸಭೆಯಿಂದ ಬೀದಿ ನಾಯಿಗಳನ್ನು ಹಿಡಿಸಲಾಗುತ್ತಿದ್ದು ಇದಕ್ಕಾಗಿ ಮೈಸೂರು ಜಿಲ್ಲೆಯ ಕೆ.ಆರ್‌.ನಗರದಿಂದ ಗೋವಿಂದ ನೇತೃತ್ವದ ತಂಡವನ್ನು ಕರೆಸಲಾಗಿದೆ.

ಈ ತಂಡ ಶನಿವಾರ ಪಟ್ಟಣದಲ್ಲಿ ಕಾರ್ಯಾಚರಣೆ ನಡೆಸಿ 100 ನಾಯಿಗಳನ್ನು ಸೆರೆ ಹಿಡಿಯಿತು. ಒಂದು ವಾರ ಕಾಲ ಪಟ್ಟಣದಲ್ಲಿ ಕಾರ್ಯಾಚರಣೆ ಮುಂದುವರಿಯಲಿದೆ.
‘ಎರಡು ದಿನಗಳ ಹಿಂದಷ್ಟೇ ಹುಚ್ಚು ನಾಯಿಯೊಂದು ದಾಳಿ ನಡೆಸಿ 24ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿತ್ತು. ಈ ಕಾರಣ ಬೀದಿ ನಾಯಿಗಳನ್ನು ಹಿಡಿಯಲು ಕ್ರಮ ಕೈಗೊಳ್ಳಲಾಗಿದೆ.

ಹಿಡಿದಿರುವ ನಾಯಿಗಳಿಗೆ ಸಂತಾನಶಕ್ತಿಹರಣ ಶಸ್ತ್ರಚಿಕಿತ್ಸೆ ಮಾಡಿಸಿ ನಂತರ ಪಟ್ಟಣದಿಂದ 50 ಕಿ.ಮೀ. ದೂರದ ನಿರ್ಜನ ಪ್ರದೇಶದಲ್ಲಿ ಬಿಡಲಾಗುವುದು’ ಎಂದು ಪುರಸಭೆ ಮುಖ್ಯಾಧಿಕಾರಿ ಎಸ್‌.ಎನ್‌.ಮಂಜುನಾಥ್‌ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.