ADVERTISEMENT

ವಳಲಹಳ್ಳಿ: ಮೂಲಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2018, 7:13 IST
Last Updated 1 ಜನವರಿ 2018, 7:13 IST

ಸಕಲೇಶಪುರ: ತಾಲ್ಲೂಕಿನ ವಳಲಹಳ್ಳಿ ಗ್ರಾ. ಪಂ. ವ್ಯಾಪ್ತಿಯಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಒತ್ತಾಯಿಸಿ ಗ್ರಾಮಸ್ಥರು ಶನಿವಾರ ವಳಲಹಳ್ಳಿ ಗ್ರಾ.ಪಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.

ಕುಡಿಯುವ ನೀರು, ರಸ್ತೆ, ಬೀದಿ ದೀಪ, ವಸತಿ ಸೌಲಭ್ಯ ಒದಗಿಸಲು ಗ್ರಾಮ ಪಂಚಾಯಿತಿ ವಿಫಲವಾಗಿದೆ. ನಮೂನೆ 50, 53 ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ನೀಡಿಲ್ಲ. ಪಿಡಿಒ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಮುಖಂಡರು, ಸದಸ್ಯರ ವಿರುದ್ಧ ಘೋಷಣೆ ಕೂಗಿ, ತಾ.ಪಂ ಇಒ ಬಂದು ಸ್ಪಷ್ಟನೆ ನೀಡಲಿ ಎಂದು ಪಟ್ಟುಹಿಡಿದರು.

ADVERTISEMENT

ತಾ.ಪಂ ಇಒ ಶಿವಾನಂದ, ಸ್ಥಳಕ್ಕೆ ಅಧೀನ ಅಧಿಕಾರಿ ಕಳುಹಿಸಿದರು. ಮನವಿ ಆಲಿಸಿದ ಅಧಿಕಾರಿ, ಪಿಡಿಒ ಬದಲಾವಣೆ ಕುರಿತ ಬೇಡಿಕೆಯನ್ನು ಜಿಲ್ಲಾ ಪಂಚಾಯಿತಿ ಗಮನಕ್ಕೆ ತರಲಾಗು ವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.