ADVERTISEMENT

ಕೊಪ್ಪದ ಕೆರೆ ಹೂಳೆತ್ತಿದ ಬಿಜೆಪಿ

ಕೆರೆಗಳು ಗ್ರಾಮೀಣ ಪ್ರದೇಶಗಳ ಸಂಜೀವಿನಿ ಇದ್ದಂತೆ–ಶಿವರಾಜ ಸಜ್ಜನರ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2017, 6:23 IST
Last Updated 3 ಫೆಬ್ರುವರಿ 2017, 6:23 IST
ಕೊಪ್ಪದ ಕೆರೆ ಹೂಳೆತ್ತಿದ ಬಿಜೆಪಿ
ಕೊಪ್ಪದ ಕೆರೆ ಹೂಳೆತ್ತಿದ ಬಿಜೆಪಿ   

ಹಿರೇಕೆರೂರ: ‘ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ರೈತರ, ಜನಸಾಮಾನ್ಯರ ಸಂಕಷ್ಟಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಬರ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿಲ್ಲ’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಸಜ್ಜನರ ದೂರಿದರು.

ಬಿಜೆಪಿಯಿಂದ ತಾಲ್ಲೂಕಿನ ಚನ್ನಳ್ಳಿ ಜಿಲ್ಲಾ ಪಂಚಾಯ್ತಿ ಕ್ಷೇತ್ರ ವ್ಯಾಪ್ತಿಯ ಕೊಪ್ಪದ ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಕಲಬುರ್ಗಿಯಲ್ಲಿ ನಡೆದ ರಾಜ್ಯ ಕಾರ್ಯಕಾರಣಿಯಲ್ಲಿ ಪಕ್ಷದ ರಾಜ್ಯ ಘಟಕದ ಬಿ.ಎಸ್.ಯಡಿಯೂರಪ್ಪ ಅವರ ಆದೇಶದಂತೆ ಕೆರೆಗಳಲ್ಲಿ ಹೂಳೆತ್ತುವ ಕಾರ್ಯ ಕೈಗೊಳ್ಳಲಾಗಿದೆ. ಬಿಜೆಪಿ ಕಾರ್ಯಕರ್ತರು ಸ್ವಯಂ ಪ್ರೇರಣೆಯಿಂದ ಕೆರೆ ಹೂಳೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ. ಕೆರೆಗಳು ಗ್ರಾಮೀಣ ಪ್ರದೇಶಗಳ ಸಂಜೀವಿನಿ ಇದ್ದಂತೆ. ಕೆರೆಗಳ ಹೂಳು ತೆಗೆದು ನೀರು ಸಂಗ್ರಹಣೆಗೆ ಆದ್ಯತೆ ನೀಡಿದಾಗ ಅಂತರ್ಜಲಮಟ್ಟ ಹೆಚ್ಚುವುದರಿಂದ ರೈತರ ಮತ್ತು ಗ್ರಾಮೀಣ ಪ್ರದೇಶದ ಜನತೆಗೆ ತುಂಬಾ ಅನುಕೂಲವಾಗಲಿದೆ’ ಎಂದರು.

ಶಾಸಕ ಯು.ಬಿ.ಬಣಕಾರ ಮಾತನಾಡಿ, ‘ರೈತರ ಜೀವನಾಡಿ ಕೆರೆಗಳನ್ನು ಹೂಳೆತ್ತುವ ಕಾರ್ಯವನ್ನು ಬಿಜೆಪಿ ತಾಲ್ಲೂಕು ಘಟಕದಿಂದ ರಾಜ್ಯದಲ್ಲಿಯೇ ಮೊದಲ ಬಾರಿಗೆ ಹಮ್ಮಿಕೊಳ್ಳಲಾಗಿದೆ. ಸತತ ಬರ ಎದುರಾಗಿ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಕೆರೆಗಳ ಹೂಳು ತೆಗೆದು ನೀರಿನ ಸಂಗ್ರಹಣೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಅಂತರ್ಜಲದ ಪ್ರಮಾಣವನ್ನು ಹೆಚ್ಚಿಸಬೇಕಿದೆ’ ಎಂದರು.

ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಎಸ್.ಆರ್.ಅಂಗಡಿ, ತಾಲ್ಲೂಕು ಪಂಚಾ ಯ್ತಿ ಅಧ್ಯಕ್ಷ ಮಹೇಶ ಗುಬ್ಬಿ, ಉಪಾಧ್ಯಕ್ಷ ಬಂಗಾರಪ್ಪ ಇಕ್ಕೇರಿ, ಜಿಲ್ಲಾ ಪಂಚಾಯ್ತಿ ಸದಸ್ಯರಾದ ಸುಮಿತ್ರಾ ಬಸನಗೌಡ ಪಾಟೀಲ, ಶಿವರಾಜ ಹರಿಜನ, ಎನ್.ಎಂ. ಈಟೇರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಚಪ್ಪರದಳ್ಳಿ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಗಂಗವ್ವ ಹರಿಜನ, ಹನುಮಂತಗೌಡ ಭರಮಣ್ಣ ನವರ, ದತ್ತಾತ್ರೆಯ ರಾಯ್ಕರ್, ಬಿ.ಎಸ್. ಪಾಟೀಲ, ಮಲ್ಲಿಕಾರ್ಜುನ ಬುರಡೀಕಟ್ಟಿ,  ಷಣ್ಮಖಯ್ಯ ಮಳಿಮಠ, ಎಸ್.ಬಿ. ಪಾಟೀಲ, ನಾರಾಯಣಪ್ಪ ಗೌರಕ್ಕನವರ, ನಿಂಗಪ್ಪ ಚಳಗೇರಿ, ಆನಂದಪ್ಪ ಹಾದಿಮನಿ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.