ADVERTISEMENT

ಗರ್ಭಕೋಶಕ್ಕೂ ಕತ್ತರಿ: ಡಾ.ಶಾಂತ ಬಂಧನಕ್ಕೆ ಕ್ರಮ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 9:17 IST
Last Updated 23 ಮಾರ್ಚ್ 2017, 9:17 IST

ಹಾವೇರಿ: ‘ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನಲ್ಲಿ ಹಣದಾಸೆಗೆ ಹಲವಾರು ಮಹಿಳೆಯರ ಗರ್ಭಕೋಶಗಳನ್ನು ತೆಗೆದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ದಂತೆ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಪಿ.ಶಾಂತ ಬಂಧನಕ್ಕೆ  ಕ್ರಮ ಕೈಗೊಳ್ಳಲಾಗುವುದು’ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಹೇಳಿದರು.

ನಗರದಲ್ಲಿನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ಅವರು, ಮಹಿಳಾ ರೋಗಿಗಳ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದರು.

‘ಈ ಬಗ್ಗೆ ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆಯ ರಾಜ್ಯ ಮಟ್ಟದ ಅಧಿಕಾರಿಗಳ ಜೊತೆ ಚರ್ಚಿಸಿ, ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಲಾಗುವುದು’ ಎಂದರು.

ರಾಣೆಬೆನ್ನೂರು ತಾಲ್ಲೂಕಿನ ಪದ್ಮಾವತಿಪುರ, ಬಸಲಿಕಟ್ಟೆ ಮತ್ತಿತರ ತಾಂಡಾದ ಮಹಿಳೆಯರಿಗೆ ಗರ್ಭ ಕೋಶದ ಶಸ್ತ್ರಚಿಕಿತ್ಸೆ ನಡೆಸಿದ ಕುರಿತು ‘ರಾಣೆಬೆನ್ನೂರ ಮಹಿಳೆಯರ ಗರ್ಭ ಕೋಶಕ್ಕೂ ಕತ್ತರಿ’ ಎಂಬ ವರದಿ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿತ್ತು. ಆ ಬಳಿಕ ವೈದ್ಯ ಡಾ. ಪಿ. ಶಾಂತ ಅವರನ್ನು ಅಮಾನತುಗೊಳಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.