ADVERTISEMENT

ಚಿಕ್ಕೇರೂರು ರಸ್ತೆ ಅಭಿವೃದ್ಧಿಗೆ ₹6.2 ಕೋಟಿ ಮಂಜೂರು

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2017, 6:46 IST
Last Updated 14 ನವೆಂಬರ್ 2017, 6:46 IST

ಹಿರೇಕೆರೂರ: ‘ತಾಲ್ಲೂಕಿನ ಚಿಕ್ಕೇರೂರು ಗ್ರಾಮದ ರಸ್ತೆ ಸಂಪೂರ್ಣ ಹಾಳಾಗಿತ್ತು.ಅದರ ಅಭಿವೃದ್ಧಿಗಾಗಿ ವಿಶೇಷ ಕಾಳಜಿ ವಹಿಸಿ ಸರ್ಕಾರದಿಂದ ₹6.2 ಕೋಟಿ ಅನುದಾನ ಮಂಜೂರು ಮಾಡಿಸಿದ್ದೇನೆ’ ಎಂದು ಕಾಂಗ್ರೆಸ್‌ ಮುಖಂಡ ಬಿ.ಸಿ.ಪಾಟೀಲ ತಿಳಿಸಿದರು. ತಾಲ್ಲೂಕಿನ ಚಿಕ್ಕೇರೂರ ಗ್ರಾಮದಲ್ಲಿ ಸೋಮವಾರ ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

‘ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಅವರೊಂದಿಗೆ ಲೋಕೋಪಯೋಗಿ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಅದರ ಪರಿಣಾಮ ಕೆಆರ್‌ಡಿಸಿಎಲ್‌ದಿಂದ ವರದಿ ತರಿಸಿಕೊಂಡು ಕಾಮಗಾರಿ ಕೈಗೊಳ್ಳಲು ಆದೇಶಿಸಿದ್ದಾರೆ. ಶೀಘ್ರವೇ ಟೆಂಡರ್  ನಡೆಯಲಿದೆ’ ಎಂದರು.

‘ಗ್ರಾಮದಲ್ಲಿ ಸುಮಾರು 1.3 ಕಿ.ಮೀ ರಸ್ತೆ ನಿರ್ಮಿಸಲು ಇಲಾಖೆಯ ಮಂಜೂರಾತಿ ಸಿಕ್ಕಿದೆ. ಈ ಹಿಂದೆ ಮನೆಗಳನ್ನು ಕಳೆದುಕೊಂಡ ಫಲಾನುಭವಿಗಳಿಗೆ ಬಸವ ವಸತಿ ವಿಶೇಷ ಯೋಜನೆ ಅಡಿಯಲ್ಲಿ 153 ಮನೆಗಳನ್ನು ಸಹ ಮಂಜೂರು ಮಾಡಿಸಲಾಗಿದೆ’ ಎಂದು ವಿವರಿಸಿದರು. ಕಾಂಗ್ರೆಸ್‌ ಮುಖಂಡ ಡಿ.ಸಿ.ಪಾಟೀಲ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗೀತಾ ಕಡೇಮನಿ, ಉಪಾಧ್ಯಕ್ಷೆ ಶೋಭಾ ವಂಟಕರ ಹಾಗೂ ಗ್ರಾಮಸ್ಥರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.