ADVERTISEMENT

ಪತ್ರಿಕೋದ್ಯಮಕ್ಕೆ ಪ್ರತ್ಯೇಕ ವಿ.ವಿ. ಅವಶ್ಯ

ಕಾಗಿನೆಲೆಯಲ್ಲಿ ಗ್ರಾಮೀಣ ಭಾಗದ ಪತ್ರಕರ್ತರಿಗೆ ತರಬೇತಿ ಶಿಬಿರಕ್ಕೆ ಸಚಿವ ಲಮಾಣಿ ಚಾಲನೆ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2018, 10:40 IST
Last Updated 17 ಮಾರ್ಚ್ 2018, 10:40 IST
ಬ್ಯಾಡಗಿ ತಾಲ್ಲೂಕು ಕಾಗಿನೆಲೆ ಗ್ರಾಮದ ಕನಕ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ತರಬೇತಿ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಉದ್ಘಾಟಿಸಿ ಮಾತನಾಡಿದರು
ಬ್ಯಾಡಗಿ ತಾಲ್ಲೂಕು ಕಾಗಿನೆಲೆ ಗ್ರಾಮದ ಕನಕ ಭವನದಲ್ಲಿ ಶುಕ್ರವಾರ ನಡೆದ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ತರಬೇತಿ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಉದ್ಘಾಟಿಸಿ ಮಾತನಾಡಿದರು   

ಹಾವೇರಿ: ‘ಆಧುನಿಕ ಯುಗದಲ್ಲಿ ವ್ಯಾಪಕವಾಗಿ ಬೆಳೆಯುತ್ತಿರುವ ಪತ್ರಿಕಾ ಕ್ಷೇತ್ರದ ಅಧ್ಯಯನಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪಿಸಬೇಕಾಗಿರುವುದು ಅತೀ ಅಶ್ಯಕ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಬ್ಯಾಡಗಿ ತಾಲ್ಲೂಕು ಕಾಗಿನೆಲೆ ಗ್ರಾಮದ ಕನಕ ಭವನದಲ್ಲಿ ಶುಕ್ರವಾರ ನಡೆದ ‘ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮೀಣ ಭಾಗದ ಪತ್ರಕರ್ತರಿಗೆ ತರಬೇತಿ ಶಿಬಿರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರಿಕೋದ್ಯಮ ಕಲಿಕೆಗಾಗಿ ಹೆಚ್ಚು ಅವಕಾಶಗಳು ದೊರಕಬೇಕು. ಗ್ರಾಮೀಣ ಭಾಗದ ಹೆಚ್ಚು ಯುವಕರು ಪತ್ರಿಕೋದ್ಯಮ ಕ್ಷೇತ್ರಕ್ಕೆ ಬರಬೇಕು ಎಂದರು.

ADVERTISEMENT

ಜಿಲ್ಲಾಧಿಕಾರಿ ಡಾ.ವೆಂಕಟೇಶ ಎಂ.ವಿ. ಮಾತನಾಡಿ, ಪ್ರಜಾಪ್ರಭುತ್ವದ ಸಂಸ್ಥೆಗಳು ತಪ್ಪು ಮಾಡಿದಲ್ಲಿ ಅದನ್ನು ತಿದ್ದುವ ಶಕ್ತಿ ಮಾಧ್ಯಮಕ್ಕಿದೆ ಎಂದರು.

ಸ್ವತಂತ್ರ್ಯ ಸಂಗ್ರಾಮದಲ್ಲಿ ಮಾಧ್ಯಮಗಳ ಪಾತ್ರ ಬಹಳಷ್ಟಿದೆ. ಸ್ವಾತಂತ್ರ್ಯ ನಂತರದಲ್ಲಿಯೂ ಸಹ ಅಭಿವ್ಯಕ್ತಿ ಸ್ವಾತಂತ್ರ್ಯ, ವ್ಯಕ್ತಿ ಸ್ವಾತಂತ್ರ್ಯ, ಸ್ವಾತಂತ್ರ್ಯದ ಬದುಕನ್ನು ಹರಿತವಾದ ಲೇಖನಿಯಿಂದ ಸಾರ್ವಜನಿಕರಿಗೆ ಮುಟ್ಟಿಸುವಲ್ಲಿ ಮಾಧ್ಯಮಗಳು ಸಾಕಷ್ಟು ಶ್ರಮವಹಿಸಿವೆ ಎಂದರು.

ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೇಗಣ್ಣಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಯಲ್ಲಪ್ಪ ಮಣ್ಣೂರ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ಸಂಯುಕ್ತ ಕರ್ನಾಟಕ ಸಂಪಾದಕ ಹುಣಸವಾಡಿ ರಾಜನ್, ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ನಿಂಗಪ್ಪ ಚಾವಡಿ, ಕಾರ್ಯದರ್ಶಿ ಎಸ್.ಶಂಕ್ರಪ್ಪ, ಹಿರಿಯ ಪತ್ರಕರ್ತ ಜಿ.ಕೆ.ಸತ್ಯ, ವಾರ್ತಾಧಿಕಾರಿ ಡಾ.ಬಿ.ಆರ್.ರಂಗನಾಥ, ಮಾಧ್ಯಮ ಅಕಾಡೆಮಿ ಸದಸ್ಯ ಮುತ್ತು ನಾಯ್ಕರ, ಡಾ.ಎಸ್.ಬಿ.ಜೋಗೂರ, ಪ್ರಾಧ್ಯಾಪಕ ಹರ್ಷವರ್ಧನ ಶೀಲವಂತ ಇದ್ದರು.

*
ಶಾಲಾ- ಕಾಲೇಜುಗಳ ಪಠ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಷಯವನ್ನು ಅಳವಡಿಸಿ, ಮಕ್ಕಳ ಕಲಿಕೆಗೆ ಅವಕಾಶ ಮಾಡಿಕೊಡಬೇಕು.
– ರುದ್ರಪ್ಪ ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.