ADVERTISEMENT

ಮುಷ್ಕರದ ಮಧ್ಯೆಯೂ ತೆರೆದ ಕ್ಲಿನಿಕ್‌ಗಳು

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2017, 8:56 IST
Last Updated 15 ನವೆಂಬರ್ 2017, 8:56 IST
ಬ್ಯಾಡಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಿರುವ ಗ್ರಾಮೀಣ ಭಾಗದ ಹೊರರೋಗಿಗಳು
ಬ್ಯಾಡಗಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ವಿಶ್ರಾಂತಿ ಪಡೆಯುತ್ತಿರುವ ಗ್ರಾಮೀಣ ಭಾಗದ ಹೊರರೋಗಿಗಳು   

ಬ್ಯಾಡಗಿ: ಖಾಸಗಿ ಆಸ್ಪತ್ರೆಗಳ ವೈದ್ಯರು ನಡೆಸುತ್ತಿರುವ ಪ್ರತಿಭಟನೆಯ ನಡುವೆಯೂ ಪಟ್ಟಣದ ಕೆಲವು ಖಾಸಗಿ ಕ್ಲಿನಿಕ್‌ಗಳು ಮಂಗಳವಾರ ಎಂದಿನಂತೆ ತೆರೆದಿದ್ದವು. ಖಾಸಗಿ ಕ್ಲಿನಿಕ್‌ಗಳು ತೆರೆದ ಕಾರಣ ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಹೊರರೋಗಿಗಳ ದಟ್ಟಣೆ ಹೆಚ್ಚಾಗಿ ಇರಲಿಲ್ಲ. ಆದರೆ, ಮಂಗಳವಾರವೂ ಪ್ರತಿಭಟನೆ ಇದೆ ಎಂದು ಭಾವಿಸಿದ ಗ್ರಾಮೀಣ ಭಾಗದ ಜನರು ಸರ್ಕಾರಿ ಆಸ್ಪತ್ರೆಯತ್ತ ಮುಖ ಮಾಡಿದ್ದು ಕಂಡು ಬಂತು.

‘ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳವಾರ 450ಕ್ಕೂ ಅಧಿಕ ಹೊರ ರೋಗಿಗಳು, 27 ಒಳರೋಗಿಗಳಿಗೆ ಚಿಕಿತ್ಸೆ ನೀಡಲಾಯಿತು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಪುಟ್ಟರಾಜ ‘ಪ್ರಜಾವಾಣಿ‘ಗೆ ತಿಳಿಸಿದರು.

‘ಬೆಳಗಾವಿ ಸುವರ್ಣ ಸೌಧದದ ಎದುರು ಭಾರತೀಯ ವೈದ್ಯಕೀಯ ಸಂಘದ ಸದಸ್ಯರು ಉಪವಾಸ ಸತ್ಯಾಗ್ರಹ ಮಾಡುತ್ತಿದ್ದೇವೆ. ಒಂದು ವೇಳೆ ಸರ್ಕಾರ ಇದಕ್ಕೆ ಬಗ್ಗದೇ ಇದ್ದರೆ ಮತ್ತೆ ಒಂದೆರಡು ದಿನದಲ್ಲಿ ಕ್ಲಿನಿಕ್‌ಗಳನ್ನು ಬಂದ್‌ ಮಾಡಿ ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುತ್ತೇವೆ’ ಎಂದು ಐಎಂಎ ತಾಲ್ಲೂಕು ಘಟಕದ ಕಾರ್ಯದರ್ಶಿ ಡಾ.ಪ್ರಕಾಶ ಭಸ್ಮೆ ‘ಪ್ರಜಾವಾಣಿ‘ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.