ADVERTISEMENT

ರಾಣೆಬೆನ್ನೂರು: 3.73 ಲಕ್ಷ ಜನಸಂಖ್ಯೆ

​ಪ್ರಜಾವಾಣಿ ವಾರ್ತೆ
Published 12 ಜುಲೈ 2017, 5:48 IST
Last Updated 12 ಜುಲೈ 2017, 5:48 IST

ರಾಣೆಬೆನ್ನೂರು:  ‘ಮಹಿಳಾ ಸಾಕ್ಷರತೆಯಿಂದ ಜನಸಂಖ್ಯೆ ನಿಯಂತ್ರಣ ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿನಿಯರು ಜನಸಂಖ್ಯೆ ನಿಯಂತ್ರಣ ಅಗತ್ಯತೆಗಳ ಕುರಿತು ಜನ ಸಮುದಾಯದಲ್ಲಿ ಅರಿವು ಮೂಡಿಸಬೇಕು’ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ನೀಲಕಂಠಪ್ಪ ಕುಸಗೂರ ಹೇಳಿದರು.

ಇಲ್ಲಿನ ಹಲಗೇರಿ ರಸ್ತೆಯ ಬಿಎಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಆರೋಗ್ಯ ಇಲಾ ಖೆಯ ಆಶ್ರಯದಲ್ಲಿ ಮಂಗಳವಾರ ತಾಲ್ಲೂಕು ಪಂಚಾಯ್ತಿ, ತಾಲ್ಲೂಕು ಮಟ್ಟದ ವಿಶ್ವ ಜನಸಂಖ್ಯೆ ನಿಯಂತ್ರಣ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಜನಸಂಖ್ಯೆ ಹೆಚ್ಚಳದಿಂದ ನಿರುದ್ಯೋಗ, ಬಡತನ, ಆಹಾರ ಪೂರೈಕೆಯಲ್ಲಿ ಕೊರತೆ, ಕುಡಿಯುವ ನೀರಿನ ಅಭಾವದಂಥ ಸಮಸ್ಯೆಗಳು ಉಂಟಾಗುತ್ತವೆ’ ಎಂದರು.

ADVERTISEMENT

ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ಶಿರೂರು ಮಾತನಾಡಿ, ‘ ಹಾವೇರಿ ಜಿಲ್ಲೆಯ ಜನಸಂಖ್ಯೆ 16.65 ದಾಟಿದ್ದು, ಮತ್ತು ರಾಣೆಬೆನ್ನೂರು ತಾಲ್ಲೂಕಿನ ಜನಸಂಖ್ಯೆ 3.73 ಲಕ್ಷದಷ್ಟಿದೆ. ಈ ಪ್ರಮಾಣದ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಮಾರಕವಾಗಿದ್ದು ಜನಸಂಖ್ಯೆ ನಿಯಂತ್ರಣದಲ್ಲಿ ಸರ್ಕಾರದ ಜೊತೆಗೆ ಸಮುದಾಯವೂ ಕೈಜೋಡಿಸ ಬೇಕಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.