ADVERTISEMENT

ವಿವಿಧ ಕಟ್ಟಡಗಳ ನವೀಕರಣ ಕಾಮಗಾರಿಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2017, 9:21 IST
Last Updated 20 ಜನವರಿ 2017, 9:21 IST
ವಿವಿಧ ಕಟ್ಟಡಗಳ ನವೀಕರಣ ಕಾಮಗಾರಿಗೆ ಚಾಲನೆ
ವಿವಿಧ ಕಟ್ಟಡಗಳ ನವೀಕರಣ ಕಾಮಗಾರಿಗೆ ಚಾಲನೆ   

ಸವಣೂರ: ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಳೆಯ ಕಟ್ಟಡವನ್ನು  ದುರಸ್ತಿ ಮಾಡಲಾಗುತ್ತಿದೆ. ಇದಕ್ಕಾಗಿ ಡಾ.ನಂಜುಂಡಪ್ಪ
ವಿಶೇಷ ಅಭಿವೃದ್ಧಿ ಯೋಜನೆಯಡಿ ₹43ಲಕ್ಷ ಅನುದಾನ ಮಂಜೂರು ಮಾಡಲಾಗಿದೆ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ಬಸ್‌ನಿಲ್ದಾಣದ ಹಳೆಯ ಕಟ್ಟಡ ದುರಸ್ತಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

‘ಹೊಸ ಚಪ್ಪಡಿ ಕಲ್ಲುಗಳ ನೆಲಹಾಸು,ಪ್ರಯಾಣಿಕರಿಗೆ ಕೂಲರ ಶೀಟ್ ಸೇರಿದಂತೆ ವಿವಿಧ ಕಾಮಗಾರಿಗಳು ಇದರಲ್ಲಿ ಸೇರಿವೆ’ ಎಂದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ ಸಾಲಿಮಠ, ಪುರಸಭೆ ಅಧ್ಯಕ್ಷ ಖಲಂದರ ಅಕ್ಕೂರ, ಉ.ಅ.ರಾಜೇಶ್ವರಿ ಬುಶೇಟ್ಟಿ,ಸಂಗಮೇಶ ಏರೆಶೀಮಿ, ವಿಭಾಗಿಯ ನಿಯಂತ್ರಣಾಧಿಕಾರಿ ಜಗದೀಶ ನಾಯ್ಕ,ಹಾವೇರಿ ವಿಭಾಗೀಯ ಎಂಜಿನೀಯರ್ ಎಸ್.ವಿ.ಅಂಗಡಿ, ಘಟಕದ ವ್ಯವಸ್ಥಾಪಕ ಚಂದ್ರಶೇಖರ ಲೋಕಂಡೆ ಸೇರಿದಂತೆ ಮತ್ತಿತರರು ಕಾರ್ಯಕ್ರಮಲದಲ್ಲಿ ಉಪಸ್ಥಿತರಿದ್ದರು.

ಪ್ರತ್ಯೇಕ ಕೊಠಡಿ ನಿರ್ಮಿಸಿ: ‘ಸವಣೂರ ಬಸ್ ನಿಲ್ದಾಣದಲ್ಲಿ ಮಹಿಳೆಯರು ನಿರ್ಭಯವಾಗಿ ಕುಳಿತುಕೊಳ್ಳಲು ಒಂದು ಕೊಠಡಿಯ ಅಗತ್ಯವಿದೆ. ನಿಲ್ದಾಣದಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆಯೂ ಇಲ್ಲವಾಗಿದೆ. ಈ ಸೌಲಭ್ಯಗಳನ್ನು ಕಲ್ಪಿಸಿದರೆ ಒಳಿತು’ ಎಂದು ಭಾರತೀಯ ಕೃಷಿಕ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಶಿವಾನಂದ ಕರಿಗಾರ ಒತ್ತಾಯಿಸಿದ್ದಾರೆ.

‘ಪ್ರವಾಸಿ ತಾಣವಾಗಿ ಅಭಿವೃದ್ಧಿ’
ಸವಣೂರ:
‘ಪಟ್ಟಣವನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ಪಟ್ಟಣದ ನವಾಬರ ಆಡಳಿತ ಕಚೇರಿ(ಹಳೆಯ ನ್ಯಾಯಾಲಯ) ನವೀಕರಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

‘ಪ್ರಾಚ್ಯವಸ್ತು ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯದಲ್ಲಿ ಮುಂದಿನ 6 ತಿಂಗಳಲ್ಲಿ ಪಟ್ಟಣವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿ ಪಡಿಸುವ ಉದ್ದೇಶ ಹೊಂದಲಾಗಿದೆ’ಎಂದರು.

‘ಇಲ್ಲಿ ಹಿಂದೆ ಸವಣೂರ ನವಾ ಬರು ವೈಭವದ ಆಡಳಿತ ನಡೆಸಿ ದ್ದರು. ಅದನ್ನು ಮರಳಿ ಸೃಷ್ಟಿಸುವ ನಿಟ್ಟಿನಲ್ಲಿ ನವಾ ಬರ ಆಡಳಿತ ಕಚೇರಿ (ದರ್ಬಾರ ಹಾಲ್) ಹಾಗೂ ನಗರ ಸೌಂದರ್ಯಕರಣಕ್ಕಾಗಿ 5 ಕೋಟಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸರ್ಕಾರ ₹1 ಕೋಟಿ ನೀಡಿದೆ. ಈಗ ಬಿಡುಗಡೆಯಾದ ಅನುದಾನದಲ್ಲಿ ನವೀಕರಣಕ್ಕೆ ಚಾಲನೆ ನೀಡಲಾಗಿದೆ’ ಎಂದರು.

ಪುರಸಭೆ ಅಧ್ಯಕ್ಷ ಖಲಂದ ಅಹ್ಮದ ಅಕ್ಕೂರ ಅಧ್ಯಕ್ಷತೆ ವಹಿಸಿದ್ದರು.  ಉಪಾಧ್ಯಕ್ಷೆ ರಾಜೇಶ್ವರಿ ಬುಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಸಂಗಪ್ಪ ಯರೇಶಿಮಿ, ಸದಸ್ಯರು, ಅಂಜುಮನ್ ಇಸ್ಲಾಂ ಸಂಸ್ಥೆಯ ಅಧ್ಯಕ್ಷ ಜೀಶಾನ್‌ಖಾನ್ ಪಠಾಣ, ಉಪವಿಗಾಧಿಕಾರಿ ಡಾ. ಸಿದ್ಧು ಹುಲ್ಲೋಳಿ, ತಹಸೀಲ್ದಾರ್ ವಿ.ಡಿ. ಸಜ್ಜನ ಹಾಗೂ ಇತರರು ಪಾಲ್ಗೊಂಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.