ADVERTISEMENT

ವೇತನ ಸಮಸ್ಯೆ: ಇತ್ಯರ್ಥಕ್ಕೆ ಸದನ ಸಮಿತಿ ಪುನರ್ ರಚನೆ

​ಪ್ರಜಾವಾಣಿ ವಾರ್ತೆ
Published 20 ಜುಲೈ 2017, 10:14 IST
Last Updated 20 ಜುಲೈ 2017, 10:14 IST

ಹಾವೇರಿ: ‘ಕರ್ನಾಟಕ ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿ ( ವೇತನ, ನಿವೃತ್ತಿ ವೇತನ ಮತ್ತು ಇತರ ಸೌಲಭ್ಯಗಳ ನಿಯಂತ್ರಣ) ವಿಧೇಯಕ 2014’ ಅನ್ವಯ ಖಾಸಗಿ ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಸಿಬ್ಬಂದಿಗೆ ಕಾಲ್ಪನಿಕ ವೇತನ ನಿಗದಿ ಪಡಿಸುವ ಬಗ್ಗೆ ಈ ಹಿಂದೆ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿತ್ತು.

 ಸಮಿತಿ ಮತ್ತು ಇಲಾಖೆಯ ಅಧಿಕಾರಿಗಳು ನೀಡಿದ ವರದಿಗಳಲ್ಲಿ ಉಲ್ಲೇಖಿಸಿದ ಆರ್ಥಿಕ ಪರಿಣಾಮಗಳ ನಡುವೆ ವ್ಯತ್ಯಾಸ ಇದೆ. ಇದನ್ನು ಮತ್ತೊಮ್ಮೆ ಕರಾರುವಕ್ಕಾಗಿ ನಿರ್ಣಯಿಸಲು ಹಿಂದಿನ ಸಮಿತಿಯನ್ನು ಪುನರುಜ್ಜೀವನಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ’ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದ್ದಾರೆ. 

‘ವಿಧಾನಪರಿಷತ್ ಸದಸ್ಯ ಬಸವರಾಜ ಎಸ್.ಹೊರಟ್ಟಿ ಅಧ್ಯಕ್ಷತೆಯ ನೂತನ ಸಮಿತಿಯ ಸದಸ್ಯರಾಗಿ ವಿಧಾನಪರಿಷತ್ತಿನ ಉಪ ಸಭಾಪತಿ ಮರಿತಿಬ್ಬೇಗೌಡ ಮತ್ತು ಸದಸ್ಯರಾದ ಪುಟ್ಟಣ್ಣ, ಎಸ್.ವಿ. ಸಂಕನೂರ, ಅಮರನಾಥ ಪಾಟೀಲ, ಶರಣಪ್ಪ ಮಟ್ಟೂರ ಇದ್ದಾರೆ. ಸಮಿತಿಯು ೩ ತಿಂಗಳೊಳಗಾಗಿ ವರದಿ ಸಲ್ಲಿಸಲು ಆದೇಶದಲ್ಲಿ ತಿಳಿಸಲಾಗಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.