ADVERTISEMENT

ಶೈಕ್ಷಣಿಕ ಅಭಿವೃದ್ಧಿಗೆ ಶ್ರಮಿಸಿ

ರಾಣೆಬೆನ್ನೂರು ತಾಲ್ಲೂಕು ಪಂಚಾಯ್ತಿ ಸಭೆಯಲ್ಲಿ ಅಧಿಕಾರಿಗಳಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 9:20 IST
Last Updated 25 ಮೇ 2017, 9:20 IST

ರಾಣೆಬೆನ್ನೂರು: ಸರ್ಕಾರ ಬಡ ಮಕ್ಕಳ ಶೈಕ್ಷಣಿಕ ಅಭಿವೃದ್ದಿಗೆ ಆಶ್ರಮ ಶಾಲೆಗಳ ಮತ್ತು ವಸತಿ ನಿಲಯಗಳ ವಿದ್ಯಾರ್ಥಿ ಗಳಿಗೆ ಕೋಟಿಗಟ್ಟಲೆ ಹಣ ಖರ್ಚು ಮಾಡುತ್ತಿದ್ದರೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ನೀರಿಕ್ಷೆ ಗಿಂತ ಕಡಿಮೆ ಆಗಿದೆ ಎಂದು ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ನೀಲಕಂಠಪ್ಪ ಕುಸ ಗೂರ ವಿಷಾದ ವ್ಯಕ್ತ ಪಡಿಸಿದರು.

ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾ ಭವನದಲ್ಲಿ ಬುಧವಾರ ನಡೆದ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿದರು.

ಇಲ್ಲಿನ ವಸತಿ ನಿಲಯಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫಲಿತಾಂಶ ಗಣನೀಯ ವಾಗಿ ಕಡಿಮೆ ಆಗಿದ್ದಕ್ಕೆ ವಸತಿ ನಿಲಯ ಗಳ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸಮಾಜ ಕಲ್ಯಾಣ ಇಲಾಖಾ ಅಧಿಕಾರಿ ಹಾಗೂ ಹಿಂದುಳಿದ ವರ್ಗಗಳ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೇ ಆಯಾ ವಸತಿ ನಿಲಯಗಳಲ್ಲಿಯ ವಾರ್ಡನ್‌ಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅವರು ಸೂಚಿಸಿದರು.

ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಅಭಾವ ಇಲ್ಲ. ತೊಂದರೆಯಾದ ಕೆಲವು ಭಾಗಗಳಲ್ಲಿ ನೀರು ಸರಬರಾಜು ಮಾಡಲು ಮುಂದಾಗುವದಾಗಿ ಬಹು ಗ್ರಾಮ ನೀರು ಯೋಜನೆಯ ಸರಬ ರಾಜು ಇಲಾಖೆಯ ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್‌ ಹನುಮಂತ ರಡ್ಡಿ ಸದಸ್ಯರು ಕೇಳಿದ ಪ್ರಶ್ನೆಗೆ ಭರವಸೆ ನೀಡಿದರು.

ತಾಲ್ಲೂಕಿನ ಇಟಗಿ, ಮಾಗೋಡ, ಕಮದೋಡ ಗ್ರಾಮ ಪಂಚಾಯ್ತಿಗೆ ಒಳಪಡುವ ಕೆಲವು ಬಿನ್‌ಸೇತಗಿಯಾದ ಸರ್ವೆ ನಂಬರ್ ಜಮೀನುಗಳನ್ನು ನಗರಸಭೆಗೆ ಒಳಪಡಿಸಿದರೆ ಗ್ರಾಮ ಪಂಚಾಯ್ತಿಗೆ ಬರುವ ಆದಾಯ ಕುಂಠಿತವಾಗುವುದು. ಎಲ್ಲ ಜಮೀನುಗಳನ್ನು ಆಯಾ ಗ್ರಾಮ ಪಂಚಾಯ್ತಿಗೆ ಉಳಿಸಿ ಕೊಳ್ಳಲು ಮಾಗೋಡ ಮತ್ತು ಇಟಗಿ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಠರಾವು ಮಾಡಿ ನಗರಸಭೆಗೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದರು.

ತಾಲ್ಲೂಕಿನ ಸುಣಕಲ್‌ಬಿದರಿ ಮತ್ತು ಹೆಡಿಯಾಲ ಗ್ರಾಮ ಪಂಚಾಯ್ತಿಗೆ ಒಳಪಡುವ ರಸ್ತೆಯ ಬದಿಯಲ್ಲಿ ತೆರೆದ ಕೊಳವೆ ಬಾವಿಗಳು ಇರುವ ಬಗ್ಗೆ ಮಾಹಿತಿ ನೀಡಿದರೆ ಅಂತಹ ಪಿಡಿಓಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು. ಪಿಡಿಓಗಳು ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತೆರೆದ ಕೊಳವೆ ಬಾವಿಗಳು ಕಂಡಲ್ಲಿ ತಕ್ಷಣ ಮುಚ್ಚಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸವರಾಜ.ಡಿ.ಸಿ ಸೂಚಿಸಿದರು.

ತಾ.ಪಂ. ಅಧ್ಯಕ್ಷ ನೀಲಕಂಠಪ್ಪ ಕುಸ ಗೂರು ಅಧ್ಯಕ್ಷತೆ ವಹಿಸಿದ್ದರು. ಉಪಾ ಧ್ಯಕ್ಷೆ ಚೈತ್ರಾ ಮಾಗನೂರ, ಸ್ಥಾಯಿ ಸಮಿತಿ ಅಧ್ಯಕ್ಷ ಭರಮಪ್ಪ ಕೊರಕಲಿ, ವ್ಯವ ಸ್ಥಾಪಕ ಬಸವರಾಜ ಶಿಡೇನೂರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.