ADVERTISEMENT

‘ಸಮಗ್ರ ಕೃಷಿ ಪದ್ಧತಿ ಅಳವಡಿಕೊಳ್ಳಿ’

ಕೃಷಿ ವಿಚಾರ ಸಂಕಿರಣ

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2014, 6:18 IST
Last Updated 2 ಆಗಸ್ಟ್ 2014, 6:18 IST

ಬ್ಯಾಡಗಿ : ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಾಗ ಮಾತ್ರ ಕೃಷಿಯಲ್ಲಿ ಹೆಚ್ಚು ಪ್ರಗತಿ ಕಾಣಲು ಸಾಧ್ಯ ಎಂದು ಹಾವೇರಿ ತಾಲ್ಲೂಕು ದೇವಿಹೊಸೂರು ತೋಟಗಾರಿಕಾ ತರಬೇತಿ ಕೇಂದ್ರದ ಸಹಾಯಕ ಪ್ರಾಧ್ಯಾಪಕ ಡಾ.ಕೃಷ್ಣ ಕುರಬೇಟ್‌ ಹೇಳಿದರು.

ತಾಲ್ಲೂಕಿನ ಹೆಡಿಗ್ಗೊಂಡ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ  ಆಶ್ರಯದಲ್ಲಿ  ಏರ್ಪಡಿಸಿದ್ದ ಕೃಷಿ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಂದೇ ಬೆಳೆಗೆ ಜೋತು ಬೀಳುವುದರಿಂದ ಇಳುವರಿ ಕಡಿಮೆಯಾಗಿ, ಭೂಮಿ ಕೂಡ ಫಲವತ್ತತೆಯನ್ನು ಕಳೆದುಕೊಳ್ಳುತ್ತದೆ. ಹೀಗಾಗಿ ಬೇರೆ ಬೇರೆ ಬೆಳೆಗಳನ್ನು ಬೆಳೆಯುವುದು ಅಗತ್ಯವಾಗಿದೆ. ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯಲು ಸಮಗ್ರ ಕೃಷಿ ಪದ್ಧತಿ ಅಳವಡಿಕೆ ಉತ್ತಮ ಎಂದರು.

ಡಾ.ವೀರೇಂದ್ರ ಹೆಗ್ಗಡೆಯವರು ಗ್ರಾಮಾಭಿವೃದ್ಧಿ ಸಂಸ್ಥೆಯನ್ನು ಹುಟ್ಟು ಹಾಕುವ ಮೂಲಕ ರೈತರಿಗೆ ಸಮಗ್ರ ಮಾಹಿತಿ ಒದಗಿಸುತ್ತಿದ್ದಾರೆ ನಮ್ಮ ರೈತರು ಅದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದರು.

ಗ್ರಾಮದ ಮುಖಂಡ ಶೇಖಪ್ಪ ಕಲ್ಮನಿ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾ.ಪಂ ಅಧ್ಯಕ್ಷೆ ನಿರ್ಮಲಾ ತಳಮನಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆಯ ಕುಮಾರ, ಪ್ರಕಾಶ, ಶಿವಮೂರ್ತೆಪ್ಪ ಕೆಂಚನಗೌಡ್ರ, ಎಂ.ಜಿ.ಪಾಟೀಲ, ಶಿವಯೋಗಿ ಶಿಡೇನೂರ  ಉಪಸ್ಥಿತರಿದ್ದರು.

ಯೋಜನಾಧಿಕಾರಿ ಗಣೇಶ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮಾಭಿವೃದ್ಧಿ ಯೋಜನೆ ಯಡಿ ‘ಕೃಷಿ ಯಂತ್ರೋಪಕರಣ ಬಾಡಿಗೆ ಸೇವಾ ಕೇಂದ್ರ‘ವನ್ನು ಸ್ಥಾಪಿಸಲಾಗಿದ್ದು ಅದರ ಪ್ರಯೋಜನ ಪಡೆದು ಕೊಳ್ಳು ವಂತೆ ತಿಳಿಸಿದರು. ಕುಸುಮಾ ಸ್ವಾಗತಿಸಿ ದರು. ಮಹಾಂತೇಶ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.