ADVERTISEMENT

₹10 ಕೋಟಿ ಮೌಲ್ಯದ ಸಕ್ಕರೆ ಜಪ್ತಿ

ಸಂಗೂರು ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆ

​ಪ್ರಜಾವಾಣಿ ವಾರ್ತೆ
Published 23 ಮೇ 2015, 9:00 IST
Last Updated 23 ಮೇ 2015, 9:00 IST

ಹಾವೇರಿ: ಸಂಗೂರಿನ ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಯ ಗೋದಾಮಿನ ಮೇಲೆ ಶುಕ್ರವಾರ ದಾಳಿ ನಡೆಸಿ, ಸುಮಾರು ₹10 ಕೋಟಿ ಮೌಲ್ಯದ ಸಕ್ಕರೆ ವಶಪಡಿಸಿಕೊಳ್ಳಲಾಗಿದೆ.

ಕಾರ್ಖಾನೆಯನ್ನು ಗುತ್ತಿಗೆ ಪಡೆದಿರುವ ಜಿ.ಎಂ.ಶುಗರ್‍ ಕಂಪೆನಿಯು ಕಬ್ಬು ಬೆಳೆಗಾರರಿಗೆ ಬಾಕಿ ಪಾವತಿಸದ ಕಾರಣ, ಹಾವೇರಿ ಉಪ ವಿಭಾಗಾಧಿಕಾರಿ ಪಿ.ಶಿವರಾಜ್‌ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

‘ಸಕ್ಕರೆ ಅಭಿವೃದ್ಧಿ ಆಯುಕ್ತರು ಹಾಗೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ. 2013–14ನೇ ಸಾಲಿನಲ್ಲಿನ ರೈತರ ಬಾಕಿ ಪಾವತಿಗೆ ಸಂಬಂಧಿಸಿದಂತೆ ಈ ಕ್ರಮ ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ನಿರ್ದೇಶನದ ಅನ್ವಯ ಕ್ರಮ ಕೈಗೊಂಡು, ರೈತರ ಬಾಕಿ ಹಣ ಪಾವತಿಸಲಾಗುವುದು’ ಎಂದು ಶಿವರಾಜ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.