ADVERTISEMENT

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ₹ 50 ಲಕ್ಷ

​ಪ್ರಜಾವಾಣಿ ವಾರ್ತೆ
Published 17 ಮೇ 2017, 6:33 IST
Last Updated 17 ಮೇ 2017, 6:33 IST

ಜೇವರ್ಗಿ: ‘ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ₹ 50ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಶಾಸಕ ಡಾ.ಅಜಯ್‌ಸಿಂಗ್ ಹೇಳಿದರು.

ಭಾನುವಾರ ತಾಲ್ಲೂಕಿನ ಆಂದೋಲಾ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಗ್ರಾಮದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಹೈದರಾಬಾದ್–ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ₹ 68ಲಕ್ಷ ಹಾಗೂ ಲೋಕಸಭಾ ಸದಸ್ಯರ ನಿಧಿಯಿಂದ ₹ 5ಲಕ್ಷ ಅನುದಾನ ನೀಡಲಾಗಿದೆ.

ಪರಿಶಿಷ್ಟ ಜಾತಿ ಬಡಾವಣೆಯ ಮುಖ್ಯರಸ್ತೆಯ ಸುಧಾರಣಾ  ಕಾಮಗಾರಿಗೆ ₹ 40ಲಕ್ಷ ಅನುದಾನ ನೀಡಲಾಗಿದೆ. ಆಂದೋಲಾ ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಸಲು ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಯೋಜನೆ ಯಲ್ಲಿ ₹ 30ಲಕ್ಷ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು.

ADVERTISEMENT

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಜನಪರ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕಾಗಿದೆ ಎಂದು ಶಾಸಕರು ಸೂಚಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ, ಆಂದೋಲಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯೆ ಗಂಗಮ್ಮ ಮಹಾದೇವಪ್ಪ ದೇಸಾಯಿ, ತಾಲ್ಲೂಕು ಪಂಚಾಯಿತಿ ಸದಸ್ಯ ಅಂಬಾರಾಯಗೌಡ ಮಾಲಿಪಾಟೀಲ, ಆಂದೋಲಾ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಮಲಾಬಾಯಿ ಸಿದ್ದಣ್ಣ ಅಣಬಿ, ಮುಖಂಡರಾದ ಕಾಸಿಂಪಟೇಲ್ ಮುದವಾಳ, ಗೌಡಪ್ಪಗೌಡ ಪೊಲೀಸ್ ಪಾಟೀಲ, ಸಂಗಣ್ಣಗೌಡ ಮಾಲಿಪಾಟೀಲ, ಯಶವಂತ ಹೋತಿನಮಡು, ಆರೀಫ್ ಸಾಬ್ ಜಮಾದಾರ್, ಕಾಶಿರಾಯಗೌಡ ಯಲಗೋಡ, ಮರೆಪ್ಪ ಸರಡಗಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪಲ್ಲಾ ಸತ್ಯಶೀಲರೆಡ್ಡಿ, ಪಂಚಾಯಿತಿ ರಾಜ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಂದೂಲಾಲ್ ರಾಠೋಡ, ಸಮಾಜ ಕಲ್ಯಾಣ ಅಧಿಕಾರಿ ಅಶೋಕ ನಾಯಕ, ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಎಂಜಿನಿಯರ್ ಸತೀಶ, ಪಂಚಾಯಿತಿರಾಜ್ ಇಲಾಖೆ ಸಹಾಯಕ ಎಂಜಿನಿಯರ್ ದೇವಣ್ಣ ಕಟ್ಟಿ ಸೇರಿದಂತೆ ತಾಲ್ಲೂಕುಮಟ್ಟದ ಅಧಿಕಾರಿಗಳು, ಆಂದೋಲಾ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.