ADVERTISEMENT

ಅವ್ವಣ್ಣ ಮ್ಯಾಕೇರಿ ವಜಾ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2017, 6:08 IST
Last Updated 21 ಜನವರಿ 2017, 6:08 IST
ಅವ್ವಣ್ಣ ಮ್ಯಾಕೇರಿ ವಜಾ: ಪ್ರತಿಭಟನೆ
ಅವ್ವಣ್ಣ ಮ್ಯಾಕೇರಿ ವಜಾ: ಪ್ರತಿಭಟನೆ   

ಕಲಬುರ್ಗಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಉಪಾಧ್ಯಕ್ಷ ಸ್ಥಾನದಿಂದ ಅವ್ವಣ್ಣ ಮ್ಯಾಕೇರಿ ಅವರನ್ನು ವಜಾಗೊಳಿಸಿರುವುದನ್ನು ಖಂಡಿಸಿ ಕೋಲಿ, ಕಬ್ಬಲಿಗ ಸಮಾಜದ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದ ಮ್ಯಾಕೇರಿ ಅವರನ್ನು ವಜಾಗೊಳಿಸುವ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದಲ್ಲಿನ ದಲಿತ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಿದ್ದಾರೆ. ಈಗಲಾದರೂ ಅವರು ತಪ್ಪನ್ನು ಸರಿಪಡಿಸಿಕೊಳ್ಳಬೇಕು ಮತ್ತು ಅವ್ವಣ್ಣ ಮ್ಯಾಕೇರಿ ಅವರಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಹಿಂದುಳಿದ ಘಟಕಕ್ಕೆ ಬಿ.ಜೆ.ಪುಟ್ಟಸ್ವಾಮಿ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡುವ ಮೂಲಕ ಯಡಿಯೂರಪ್ಪ ಸ್ವಜಾತಿ ಪ್ರೇಮ ಮೆರೆದಿದ್ದಾರೆ. ಅದೇ ರೀತಿ ಕಲಬುರ್ಗಿ ನಗರ ಹಾಗೂ ಗ್ರಾಮೀಣ ಘಟಕದ ಅಧ್ಯಕ್ಷ ಸ್ಥಾನಕ್ಕೆ ಲಿಂಗಾಯತ ಕೋಮಿನ ಬಿ.ಜಿ.ಪಾಟೀಲ ಹಾಗೂ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಅವರನ್ನು ನೇಮಕ ಮಾಡಿ, ಹಿಂದುಳಿದ ವರ್ಗದವರನ್ನು ಕಡೆಗಣಿಸಿದ್ದಾರೆ ಎಂದು ಆರೋಪಿಸಿದರು.

ಹೈ.ಕ ಕೋಲಿ, ಕಬ್ಬಲಿಗ ಸಮಾಜದ ಅಧ್ಯಕ್ಷ ಬಸವರಾಜ ಬೂದಿಹಾಳ,  ಬಸವರಾಜ ಹರವಾಳ, ಶಂಕು ಮ್ಯಾಕೇರಿ, ತಮ್ಮಣ್ಣ ಡಿಗ್ಗಿ, ಹಣಮಂತ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.