ADVERTISEMENT

ಎಂ.ಬಿ.ಪಾಟೀಲ ಸಿದ್ದರಾಮಯ್ಯ ಮೇಲೆ ಆಣೆ ಮಾಡಲಿ

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2017, 7:13 IST
Last Updated 14 ಸೆಪ್ಟೆಂಬರ್ 2017, 7:13 IST
ಕೆ.ಎಸ್.ಈಶ್ವರಪ್ಪ
ಕೆ.ಎಸ್.ಈಶ್ವರಪ್ಪ   

ಕಲಬುರ್ಗಿ: ‘ಸಿದ್ದಗಂಗಾ ಶ್ರೀಗಳ ಹೇಳಿಕೆ ಕುರಿತು ಸಚಿವ ಎಂ.ಬಿ.ಪಾಟೀಲ ಅವರು ಆಣೆ–ಪ್ರಮಾಣ ಮಾಡುವುದಾದರೆ ಸಿದ್ದರಾಮಯ್ಯನವರ ಮೇಲೆ ಮಾಡಲಿ’ ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೀರಶೈವ–ಲಿಂಗಾಯತ ಧರ್ಮಕ್ಕೆ ಸಂಬಂಧಿಸಿದ ಹೋರಾಟ ಇಂದು–ನಿನ್ನೆಯದಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ವಿಷಯವನ್ನು ರಾಜಕೀಯವಾಗಿ ಬಳಸುವ ಮೂಲಕ ಮತ್ತೆ ಮುಖ್ಯಮಂತ್ರಿ ಆಗುವ ಷಡ್ಯಂತ್ರ ನಡೆಸಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯದ ಜನತೆ ಪ್ರಜ್ಞಾವಂತರಿದ್ದಾರೆ. ಹೀಗಾಗಿ ಮತ್ತೆ ಮುಖ್ಯಮಂತ್ರಿ ಆಗುವ ಸಿದ್ದರಾಮಯ್ಯ ಅವರ ಕನಸು ಭಗ್ನವಾಗಲಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
‘ಬಹುತೇಕ ಒಕ್ಕಲಿಗರು ಎಚ್.ಡಿ.ದೇವೇಗೌಡ ಅವರನ್ನು ಬೆಂಬಲಿಸುತ್ತಾರೆ. ಲಿಂಗಾಯತರು, ಬ್ರಾಹ್ಮಣರು ಬಿ.ಎಸ್.ಯಡಿಯೂರಪ್ಪ ಅವರ ಜತೆ ಇದ್ದಾರೆ. ಇದನ್ನು ಅರಿತ ಸಿದ್ದರಾಮಯ್ಯ ವೀರಶೈವ–ಲಿಂಗಾಯತರ ನಡುವೆ ಜಗಳ ಹಚ್ಚಿ, ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ’ ಎಂದು ದೂರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.