ADVERTISEMENT

ಐತಿಹಾಸಿಕ ತಾಣಗಳ ಜೀರ್ಣೋದ್ಧಾರಕ್ಕೆ ಆದ್ಯತೆ

ಸೇಡಂ ಉತ್ಸವದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 16 ಜನವರಿ 2017, 6:15 IST
Last Updated 16 ಜನವರಿ 2017, 6:15 IST
ಐತಿಹಾಸಿಕ ತಾಣಗಳ ಜೀರ್ಣೋದ್ಧಾರಕ್ಕೆ ಆದ್ಯತೆ
ಐತಿಹಾಸಿಕ ತಾಣಗಳ ಜೀರ್ಣೋದ್ಧಾರಕ್ಕೆ ಆದ್ಯತೆ   

ಸೇಡಂ: ತಾಲ್ಲೂಕಿನ ಐತಿಹಾಸಿಕ ಸ್ಥಳಗಳ ಜೀರ್ಣೋದ್ಧಾರಕ್ಕೆ ಆದ್ಯತೆ ನೀಡ ಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ಇಲ್ಲಿನ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಸೇಡಂ ಉತ್ಸವ ಸಮಿತಿ, ಪುರಸಭೆ ಮತ್ತು ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಶನಿವಾರ ಆಯೋಜಿಸಿದ್ದ 9ನೇ ಸೇಡಂ ಉತ್ಸವ ಕಾರ್ಯಕ್ರಮದಲ್ಲಿ ಅವ ರು ಮಾತನಾಡಿದರು.

ಕಳೆದ 10 ವರ್ಷಗಳಿಂದ ಸೇಡಂ ತಾಲ್ಲೂಕಿನ ಅಭಿವೃದ್ಧಿಗೆ ಪ್ರಾಮಾ ಣಿಕವಾಗಿ ಕೆಲಸ ಮಾಡಿದ್ದೇನೆ.  ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಕ್ಕೆ ಡಾಂಬರ್‌ ರಸ್ತೆ ನಿರ್ಮಿಸಲಾಗುವುದು ಎಂದು ಹೇಳಿದರು.

ಸೇಡಂ ಉತ್ಸವಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರತಿ ಯೊಬ್ಬರು ಉಲ್ಲಾಸದಿಂದ ಪಾಲ್ಗೊ ಳ್ಳುತ್ತಿದ್ದಾರೆ. ಉತ್ಸವ ತಾಲ್ಲೂಕಿನ ಜನರನ್ನು ಒಂದೆಡೆ ಸೇರಿಸಿ, ನಾವೆಲ್ಲರೂ ಒಂದೆ ಎನ್ನುವ ಭಾವನೆಯನ್ನು ಮೂಡಿ ಸುತ್ತಿದೆ. ಉತ್ಸವ ತಾಲ್ಲೂಕಿನ ಐತಿಹಾಸಿಕ ತಾಣಗಳ, ಧಾರ್ಮಿಕ ಕ್ಷೇತ್ರಗಳು ಮತ್ತು ತಾಲ್ಲೂಕಿನ ಸಂಸ್ಕೃತಿಯ ಮಹತ್ವ ತಿಳಿಸುತ್ತದೆ ಎಂದರು.

ತಾಲ್ಲೂಕಿನಾದ್ಯಂತ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡ ಲಾಗಿದ್ದು, ರೈತರ ಅನುಕೂಲಕ್ಕಾಗಿ ಕಾಗಿಣಾ ನದಿಗೆ ಸುಮಾರು 10 ಕಡೆ ಗಳಲ್ಲಿ ಬ್ರಿಜ್ ಕಂ ಬ್ಯಾರೇಜನ್ನು ನಿರ್ಮಿ ಸಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸುಮಾರು ₹ 25 ಕೋಟಿ ವೆಚ್ಚದ 24/7 ಕುಡಿಯುವ ನೀರಿನ ಸಂಪರ್ಕವನ್ನು ಕಲ್ಪಿಸಲಾಗುತ್ತಿದೆ.

ADVERTISEMENT

ಅಲ್ಲದೆ ₹ 25 ಕೊಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆ ನಿರ್ಮಾಣ, ₹ 2 ಕೋಟಿ ವೆಚ್ಚದ ಒಳಾಂಗಣ ಕ್ರೀಡಾಂಗಣ, ₹10 ಸಾವಿರ ಕೋಟಿ ವೆಚ್ಚ ದ ಮಿನಿ ವಿಧಾನಸೌಧ, ₹ 5 ಕೋಟಿ ವೆಚ್ಚದ ರಂಗಮಂದಿರ ನಿರ್ಮಾಣ ಕಾಮಗಾರಿ ನಡೆದಿದೆ. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ 10 ಸಾವಿರ ಮೆಟ್ರಿಕ್ ಟನ್ ಸಾಮರ್ಥ್ಯದ ಗೋದಾ ಮು ನಿರ್ಮಾಣ ಮಾಡುವ ಉದ್ದೇಶ ಇದೆ ಎಂದರು. ಬಸವರಾಜ ಪಾಟೀಲ ಸೇಡಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.